యెహెజ్కేలు 30 : 1 (ERVTE)
{#1ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು } ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:
యెహెజ్కేలు 30 : 2 (ERVTE)
“ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು. “ ‘ಅಳುತ್ತಾ, “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.
యెహెజ్కేలు 30 : 3 (ERVTE)
ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.
యెహెజ్కేలు 30 : 4 (ERVTE)
ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.
యెహెజ్కేలు 30 : 5 (ERVTE)
“ ‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು[* ಇಸ್ರೇಲಿನ ಜನರು ಅಕ್ಷರಶಃ, “ಒಪ್ಪಂದ ದೇಶದ ಜನರು.” ] ಇವರೆಲ್ಲರೂ ನಾಶವಾಗುವರು.
యెహెజ్కేలు 30 : 6 (ERVTE)
“ ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸಾಬನ್ ತನಕ ಸಾಯುವರು. ಇದು ನನ್ನ ಒಡೆಯನಾದ ಯೆಹೋವನ ನುಡಿ.
యెహెజ్కేలు 30 : 7 (ERVTE)
ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು
యెహెజ్కేలు 30 : 8 (ERVTE)
ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು ಅದರ ಸಹಾಯಕರನ್ನು ದಹಿಸುವದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.
యెహెజ్కేలు 30 : 9 (ERVTE)
“ ‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’ ”
యెహెజ్కేలు 30 : 10 (ERVTE)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ; “ಈಜಿಪ್ಟಿನ ಜನರನ್ನು ನಾಶಮಾಡುವುದಕ್ಕಾಗಿ ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಉಪಯೋಗಿಸುವೆನು.
యెహెజ్కేలు 30 : 11 (ERVTE)
ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.
యెహెజ్కేలు 30 : 12 (ERVTE)
ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”
యెహెజ్కేలు 30 : 13 (ERVTE)
{#1ಈಜಿಪ್ಟಿನ ವಿಗ್ರಹಗಳು ನಾಶವಾಗುವವು } ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.
యెహెజ్కేలు 30 : 14 (ERVTE)
ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನುಟುಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.
యెహెజ్కేలు 30 : 15 (ERVTE)
ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು. ತೆಬೆಸದ ಜನರನ್ನು ನಾನು ನಾಶಮಾಡುವೆನು.
యెహెజ్కేలు 30 : 16 (ERVTE)
ಈಜಿಪ್ಟಿನಲ್ಲಿ ಬೆಂಕಿಯನ್ನುಟುಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.
యెహెజ్కేలు 30 : 17 (ERVTE)
ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
యెహెజ్కేలు 30 : 18 (ERVTE)
ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
యెహెజ్కేలు 30 : 19 (ERVTE)
ನಾನು ಈಜಿಪ್ಟನ್ನು ಶಿಕ್ಷಿಸುವಾಗ ನಾನೇ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”
యెహెజ్కేలు 30 : 20 (ERVTE)
{#1ಈಜಿಪ್ಟ್ ನಿತ್ಯಕಾಲಕ್ಕೂ ಬಲಹೀನವಾಗುವದು } ಸೆರೆಹಿಡಿಯಲ್ಪಟ್ಟ ಹನ್ನೊಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,
యెహెజ్కేలు 30 : 21 (ERVTE)
“ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”
యెహెజ్కేలు 30 : 22 (ERVTE)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.
యెహెజ్కేలు 30 : 23 (ERVTE)
ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು.
యెహెజ్కేలు 30 : 24 (ERVTE)
ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.
యెహెజ్కేలు 30 : 25 (ERVTE)
ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು.
యెహెజ్కేలు 30 : 26 (ERVTE)
ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”
❮
❯