యెహెజ్కేలు 37 : 1 (ERVTE)
{#1ಒಣಗಿದ ಎಲುಬುಗಳ ದರ್ಶನ } ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.
యెహెజ్కేలు 37 : 2 (ERVTE)
ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.
యెహెజ్కేలు 37 : 3 (ERVTE)
యెహెజ్కేలు 37 : 4 (ERVTE)
ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು. ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ.
యెహెజ్కేలు 37 : 5 (ERVTE)
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ನಾನು ನಿಮಗೆ ಉಸಿರನ್ನು[* ಉಸಿರು ಅಥವಾ ಆತ್ಮ. ] ಬರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.
యెహెజ్కేలు 37 : 6 (ERVTE)
ನಾನು ನಿಮ್ಮಲ್ಲಿ ಸಾಐಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’ ”
యెహెజ్కేలు 37 : 7 (ERVTE)
ನಾನು ಎಲುಬುಗಳೊಂದಿಗೆ ಯೆಹೋವನ ಪರವಾಗಿ ಮಾತನಾಡಿದೆನು. ನಾನು ಮಾತನಾಡುತ್ತಾ ಇರುವಾಗಲೇ ಒಂದು ದೊಡ್ಡ ಶಬ್ದವನ್ನು ಕೇಳಿದೆನು. ಎಲುಬುಗಳು ಅಲ್ಲಾಡತೊಡಗಿದವು ಮತ್ತು ಒಂದಕ್ಕೊಂದು ಜೋಡಿಸಲ್ಪಟ್ಟವು.
యెహెజ్కేలు 37 : 8 (ERVTE)
ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸ್ನಾಯುಗಳು, ನರಗಳು ಬಂದವು; ಮತ್ತು ಚರ್ವವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ.
యెహెజ్కేలు 37 : 9 (ERVTE)
యెహెజ్కేలు 37 : 10 (ERVTE)
ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಧಿದು. ಅವರ ಮೇಲೆ ಗಾಳಿ ಧಿದು. ಆಗ ಅವುಗಳಿಗೆ ಜೀವ ಬರುವದು.’ ”
యెహెజ్కేలు 37 : 11 (ERVTE)
ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು. ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.
యెహెజ్కేలు 37 : 12 (ERVTE)
ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸಬದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು.
యెహెజ్కేలు 37 : 13 (ERVTE)
ನನ್ನ ಜನರೇ, ನಿಮ್ಮನ್ನು ಸಮಾಧಿಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.
యెహెజ్కేలు 37 : 14 (ERVTE)
ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸಬದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’ ” ಇದು ಯೆಹೋವನ ನುಡಿ.
యెహెజ్కేలు 37 : 15 (ERVTE)
{#1ಯೆಹೂದ ಮತ್ತು ಇಸ್ರೇಲ್ ಒಂದಾಗುವದು } ಯೆಹೋವನ ಸಂದೇಶವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ:
యెహెజ్కేలు 37 : 16 (ERVTE)
“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.
యెహెజ్కేలు 37 : 17 (ERVTE)
ಆಮೇಲೆ ಆ ಎರಡೂ ದಂಡಗಳನ್ನು ನಿನ್ನ ಕೈಯಲ್ಲಿ ಕೂಡಿಸು. ಆಗ ಅದು ಒಂದೇ ದಂಡವಾಗುವದು.
యెహెజ్కేలు 37 : 18 (ERVTE)
“ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು.
యెహెజ్కేలు 37 : 19 (ERVTE)
ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯೀಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಟ್ಟು ಒಂದೇ ದಂಡವಾಗುವಂತೆ ಮಾಡುವೆನು. ಅವು ನನ್ನ ಕೈಯಲ್ಲಿ ಒಂದೇ ದಂಡವಾಗುತ್ತವೆ.’
యెహెజ్కేలు 37 : 20 (ERVTE)
“ಆ ದಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ನಿನ್ನೆದುರಿಗೆ ಚಾಚು. ನೀನು ಅವುಗಳ ಮೇಲೆ ಹೆಸರು ಬರೆದಿರುವೆ.
యెహెజ్కేలు 37 : 21 (ERVTE)
ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸಬದೇಶಕ್ಕೆ ತರುವೆನು.
యెహెజ్కేలు 37 : 22 (ERVTE)
ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.
యెహెజ్కేలు 37 : 23 (ERVTE)
ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.
యెహెజ్కేలు 37 : 24 (ERVTE)
“ ‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.
యెహెజ్కేలు 37 : 25 (ERVTE)
ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.
యెహెజ్కేలు 37 : 26 (ERVTE)
ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸಬದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.
యెహెజ్కేలు 37 : 27 (ERVTE)
ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.
యెహెజ్కేలు 37 : 28 (ERVTE)
ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’ ”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28