ఎజ్రా 1 : 1 (ERVTE)
{#1ಯೆಹೂದ್ಯ ಸೆರೆಯಾಳುಗಳು ಹಿಂತಿರುಗಿ ಹೋಗಲು ಸೈರಸನ ಸಹಾಯ } ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ[* ಮೊದಲನೆಯ ವರ್ಷದಲ್ಲಿ ಕ್ರಿ.ಪೂ. 538ನೇ ಇಸವಿ. ] ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:
ఎజ్రా 1 : 2 (ERVTE)
“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.
ఎజ్రా 1 : 3 (ERVTE)
ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.
ఎజ్రా 1 : 4 (ERVTE)
ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”
ఎజ్రా 1 : 5 (ERVTE)
ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.
ఎజ్రా 1 : 6 (ERVTE)
ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.
ఎజ్రా 1 : 7 (ERVTE)
ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೆರುಸಲೇಮ್ ದೇವಾಲಯದಿಂದ ಸೂರೆಮಾಡಿ ತಂದ ಸಾಮಾಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು.
ఎజ్రా 1 : 8 (ERVTE)
ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.
ఎజ్రా 1 : 9 (ERVTE)
ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29
ఎజ్రా 1 : 10 (ERVTE)
ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000
ఎజ్రా 1 : 11 (ERVTE)
ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
❮
❯
1
2
3
4
5
6
7
8
9
10
11