ఎజ్రా 5 : 1 (ERVTE)
{#1ದಾರ್ಯಾವೆಷನ ರಾಜಾಜ್ಞೆ } ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.
ఎజ్రా 5 : 2 (ERVTE)
ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.
ఎజ్రా 5 : 3 (ERVTE)
ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?
ఎజ్రా 5 : 4 (ERVTE)
ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು.
ఎజ్రా 5 : 5 (ERVTE)
ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾ ಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.
ఎజ్రా 5 : 6 (ERVTE)
ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.
ఎజ్రా 5 : 7 (ERVTE)
ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು.
ఎజ్రా 5 : 8 (ERVTE)
8 ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.
ఎజ్రా 5 : 9 (ERVTE)
9 “ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅಪ್ಪಣೆಕೊಟ್ಟರು?” ಎಂದು ಅವರ ನಾಯಕರನ್ನು ಪ್ರಶ್ನಿಸಿದೆವು.
ఎజ్రా 5 : 10 (ERVTE)
ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.
ఎజ్రా 5 : 11 (ERVTE)
11 ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.
ఎజ్రా 5 : 12 (ERVTE)
ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.
ఎజ్రా 5 : 13 (ERVTE)
ಅನಂತರ ಬಾಬಿಲೋನಿನ ಅರಸನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದೇವಾಲಯವನ್ನು ತಿರಿಗಿ ಕಟ್ಟಲು ವಿಶೇಷ ಅನುಮತಿಯನ್ನು ಕೊಟ್ಟನು.
ఎజ్రా 5 : 14 (ERVTE)
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
ఎజ్రా 5 : 15 (ERVTE)
15 ಅರಸನಾದ ಸೈರಸನು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.”
ఎజ్రా 5 : 16 (ERVTE)
16 ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.
ఎజ్రా 5 : 17 (ERVTE)
17 ರಾಜರಾದ ತಾವು ಅಪೇಕ್ಷಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ.

1 2 3 4 5 6 7 8 9 10 11 12 13 14 15 16 17