ఆదికాండము 10 : 1 (ERVTE)
{#1ಜನಾಂಗಗಳ ಬೆಳವಣಿಗೆ ಮತ್ತು ವಿಸ್ತರಣೆ }
ఆదికాండము 10 : 2 (ERVTE)
ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು: {#1ಯೆಫೆತನ ಸಂತತಿಯವರು } ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
ఆదికాండము 10 : 3 (ERVTE)
ಗೋಮೆರನ ಗಂಡುಮಕ್ಕಳು: ಅಷ್ಕೆನಸ್, ರೀಫತ್ ಮತ್ತು ತೋಗರ್ಮ.
ఆదికాండము 10 : 4 (ERVTE)
ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.
ఆదికాండము 10 : 5 (ERVTE)
ఆదికాండము 10 : 6 (ERVTE)
ತೀರ ಪ್ರದೇಶದ[* ತೀರ ಪ್ರದೇಶ ಮೆಡಿಟೇರಿಯನ್ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳು. ] ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು. {#1ಹಾಮನ ಸಂತತಿಯವರು } ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.
ఆదికాండము 10 : 7 (ERVTE)
ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.
ఆదికాండము 10 : 8 (ERVTE)
ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
ఆదికాండము 10 : 9 (ERVTE)
ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
ఆదికాండము 10 : 10 (ERVTE)
ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.
ఆదికాండము 10 : 11 (ERVTE)
(11-12)ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.
ఆదికాండము 10 : 12 (ERVTE)
ఆదికాండము 10 : 13 (ERVTE)
(13-14) ಮಿಚ್ರಯಿಮನು ಲೂದ್, ಅನಾಮ್, ಲೆಹಾಬ್, ನಪ್ತಹ್, ಪತ್ರುಸ್, ಕಸ್ಲುಹ್ಯ ಮತ್ತು ಕಪ್ತೋರ್ಯ ಎಂಬವರ ತಂದೆ. ಕಸ್ಲುಹ್ಯರು ಫಿಲಿಷ್ಟಿಯರ ಪಿತೃಗಳು.
ఆదికాండము 10 : 14 (ERVTE)
ఆదికాండము 10 : 15 (ERVTE)
ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.
ఆదికాండము 10 : 16 (ERVTE)
(16-18)ಕಾನಾನನು ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದವು.
ఆదికాండము 10 : 17 (ERVTE)
ఆదికాండము 10 : 18 (ERVTE)
ఆదికాండము 10 : 19 (ERVTE)
ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.
ఆదికాండము 10 : 20 (ERVTE)
ఆదికాండము 10 : 21 (ERVTE)
ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು. {#1ಶೇಮನ ಸಂತತಿಯವರು } ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.
ఆదికాండము 10 : 22 (ERVTE)
ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.
ఆదికాండము 10 : 23 (ERVTE)
ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್.
ఆదికాండము 10 : 24 (ERVTE)
ಅರ್ಪಕ್ಷದನು ಶೆಲಹನ ತಂದೆ, ಶೆಲಹನು ಎಬರನ ತಂದೆ.
ఆదికాండము 10 : 25 (ERVTE)
ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.
ఆదికాండము 10 : 26 (ERVTE)
ಯೊಕ್ತಾನನ ಗಂಡುಮಕ್ಕಳು: ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್ ಮತ್ತು ಯೆರಹ,
ఆదికాండము 10 : 27 (ERVTE)
ಹದೋರಾಮ್, ಊಜಾಲ್, ದಿಕ್ಲಾ.
ఆదికాండము 10 : 28 (ERVTE)
ಓಬಾಲ್, ಅಬೀಮಯೇಲ್, ಶೆಬಾ,
ఆదికాండము 10 : 29 (ERVTE)
ಓಫೀರ್, ಹವೀಲ ಮತ್ತು ಯೋಬಾಬ್.
ఆదికాండము 10 : 30 (ERVTE)
ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.
ఆదికాండము 10 : 31 (ERVTE)
ఆదికాండము 10 : 32 (ERVTE)
ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು. ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32