ఆదికాండము 13 : 1 (ERVTE)
{#1ಕಾನಾನಿಗೆ ಅಬ್ರಾಮನ ಮರುಪ್ರಯಾಣ } ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.
ఆదికాండము 13 : 2 (ERVTE)
ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.
ఆదికాండము 13 : 3 (ERVTE)
ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು.
ఆదికాండము 13 : 4 (ERVTE)
ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.
ఆదికాండము 13 : 5 (ERVTE)
{#1ಅಬ್ರಾಮನು ಮತ್ತು ಲೋಟನು ಅಗಲಿದ್ದು } ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣಮಾಡುತ್ತಿದ್ದನು. ಲೋಟನಿಗೂ ಸಹ ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು.
ఆదికాండము 13 : 6 (ERVTE)
ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ.
ఆదికాండము 13 : 7 (ERVTE)
ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.
ఆదికాండము 13 : 8 (ERVTE)
ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
ఆదికాండము 13 : 9 (ERVTE)
ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.
ఆదికాండము 13 : 10 (ERVTE)
ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
ఆదికాండము 13 : 11 (ERVTE)
ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.
ఆదికాండము 13 : 12 (ERVTE)
ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.
ఆదికాండము 13 : 13 (ERVTE)
ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.
ఆదికాండము 13 : 14 (ERVTE)
ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
ఆదికాండము 13 : 15 (ERVTE)
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.
ఆదికాండము 13 : 16 (ERVTE)
ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.
ఆదికాండము 13 : 17 (ERVTE)
ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
ఆదికాండము 13 : 18 (ERVTE)
ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.
❮
❯
1
2
3
4
5
6
7
8
9
10
11
12
13
14
15
16
17
18