ఆదికాండము 21 : 1 (ERVTE)
{#1ಸಾರಳಿಗೆ ಮಗುವಾಯಿತು } ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.
ఆదికాండము 21 : 2 (ERVTE)
ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.
ఆదికాండము 21 : 3 (ERVTE)
ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ ಇಸಾಕ ಎಂದು ಹೆಸರಿಟ್ಟನು.
ఆదికాండము 21 : 4 (ERVTE)
ಇಸಾಕನಿಗೆ ಎಂಟು ದಿನಗಳಾಗಿದ್ದಾಗ, ದೇವರ ಆಜ್ಞೆಗನುಸಾರವಾಗಿ ಅಬ್ರಹಾಮನು ಅವನಿಗೆ ಸುನ್ನತಿ ಮಾಡಿದನು.
ఆదికాండము 21 : 5 (ERVTE)
ಅಬ್ರಹಾಮನಿಗೆ ನೂರು ವರ್ಷಗಳಾಗಿದ್ದಾಗ, ಅವನ ಮಗನಾದ ಇಸಾಕನು ಹುಟ್ಟಿದನು.
ఆదికాండము 21 : 6 (ERVTE)
ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.
ఆదికాండము 21 : 7 (ERVTE)
ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.
ఆదికాండము 21 : 8 (ERVTE)
{#1ಕುಟುಂಬದಲ್ಲಾದ ಒಡಕು } ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.
ఆదికాండము 21 : 9 (ERVTE)
ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.
ఆదికాండము 21 : 10 (ERVTE)
ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
ఆదికాండము 21 : 11 (ERVTE)
ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸತೊಡಗಿದನು.
ఆదికాండము 21 : 12 (ERVTE)
ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
ఆదికాండము 21 : 13 (ERVTE)
ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
ఆదికాండము 21 : 14 (ERVTE)
ఆదికాండము 21 : 15 (ERVTE)
ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು. ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.
ఆదికాండము 21 : 16 (ERVTE)
ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.
ఆదికాండము 21 : 17 (ERVTE)
ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.
ఆదికాండము 21 : 18 (ERVTE)
ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
ఆదికాండము 21 : 19 (ERVTE)
ఆదికాండము 21 : 20 (ERVTE)
ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು. ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.
ఆదికాండము 21 : 21 (ERVTE)
ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.
ఆదికాండము 21 : 22 (ERVTE)
{#1ಅಬ್ರಹಾಮನು ಅಬೀಮೆಲೆಕನೊಡನೆ ಮಾಡಿಕೊಂಡ ಒಪ್ಪಂದ } ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.
ఆదికాండము 21 : 23 (ERVTE)
ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.
ఆదికాండము 21 : 24 (ERVTE)
ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು.
ఆదికాండము 21 : 25 (ERVTE)
ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.
ఆదికాండము 21 : 26 (ERVTE)
ఆదికాండము 21 : 27 (ERVTE)
ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು. ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;
ఆదికాండము 21 : 28 (ERVTE)
ಅಲ್ಲದೆ ಅಬ್ರಹಾಮನು ಮಂದೆಯ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕಿಸಿದನು.
ఆదికాండము 21 : 29 (ERVTE)
ఆదికాండము 21 : 30 (ERVTE)
ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವುದೇಕೆ?” ಎಂದು ಕೇಳಿದನು.
ఆదికాండము 21 : 31 (ERVTE)
ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು.
ఆదికాండము 21 : 32 (ERVTE)
ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.
ఆదికాండము 21 : 33 (ERVTE)
ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.
ఆదికాండము 21 : 34 (ERVTE)
ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34