ఆదికాండము 23 : 1 (ERVTE)
{#1ಸಾರಳ ಮರಣ } ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.
ఆదికాండము 23 : 2 (ERVTE)
ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.
ఆదికాండము 23 : 3 (ERVTE)
ಬಳಿಕ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ,
ఆదికాండము 23 : 4 (ERVTE)
ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
ఆదికాండము 23 : 6 (ERVTE)
“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.
ఆదికాండము 23 : 7 (ERVTE)
ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ,
ఆదికాండము 23 : 8 (ERVTE)
ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
ఆదికాండము 23 : 9 (ERVTE)
ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
ఆదికాండము 23 : 10 (ERVTE)
ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,
ఆదికాండము 23 : 11 (ERVTE)
“ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.
ఆదికాండము 23 : 12 (ERVTE)
ಆಗ ಅಬ್ರಹಾಮನು ಹಿತ್ತಿಯರಿಗೆ ತಲೆಬಾಗಿ ನಮಸ್ಕರಿಸಿದನು.
ఆదికాండము 23 : 13 (ERVTE)
ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
ఆదికాండము 23 : 14 (ERVTE)
ఆదికాండము 23 : 15 (ERVTE)
“ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
ఆదికాండము 23 : 16 (ERVTE)
ఆదికాండము 23 : 17 (ERVTE)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು. (17-18)ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.
ఆదికాండము 23 : 18 (ERVTE)
ఆదికాండము 23 : 19 (ERVTE)
ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
ఆదికాండము 23 : 20 (ERVTE)
ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20