ఆదికాండము 29 : 1 (ERVTE)
{#1ಯಾಕೋಬನು ರಾಹೇಲಳನ್ನು ಭೇಟಿಯಾದದ್ದು } ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.
ఆదికాండము 29 : 2 (ERVTE)
ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು.
ఆదికాండము 29 : 3 (ERVTE)
ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.
ఆదికాండము 29 : 5 (ERVTE)
ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.
ఆదికాండము 29 : 6 (ERVTE)
ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು. ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು.
ఆదికాండము 29 : 7 (ERVTE)
ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.
ఆదికాండము 29 : 8 (ERVTE)
ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.
ఆదికాండము 29 : 9 (ERVTE)
ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು. ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)
ఆదికాండము 29 : 10 (ERVTE)
ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.
ఆదికాండము 29 : 11 (ERVTE)
ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು.
ఆదికాండము 29 : 12 (ERVTE)
ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.
ఆదికాండము 29 : 13 (ERVTE)
ఆదికాండము 29 : 14 (ERVTE)
ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.
ఆదికాండము 29 : 15 (ERVTE)
ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು. {#1ಯಾಕೋಬನಿಗಾದ ಮೋಸ }
ఆదికాండము 29 : 16 (ERVTE)
ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.
ఆదికాండము 29 : 17 (ERVTE)
ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್. ರಾಹೇಲಳು ಸುಂದರವಾಗಿದ್ದಳು. ಲೇಯಳ ಕಣ್ಣುಗಳು ಸೌಮ್ಯವಾಗಿದ್ದವು.[* ಲೇಯಳ ಕಣ್ಣುಗಳು ಸೌಮ್ಯವಾಗಿದ್ದವು ಇದರರ್ಥ: “ಲೇಯಳು ಬಹಳ ಸುಂದರವಾಗಿರಲಿಲ್ಲ.” ]
ఆదికాండము 29 : 18 (ERVTE)
ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.
ఆదికాండము 29 : 19 (ERVTE)
ఆదికాండము 29 : 20 (ERVTE)
ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.
ఆదికాండము 29 : 21 (ERVTE)
ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.
ఆదికాండము 29 : 22 (ERVTE)
ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು. ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗೆಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು.
ఆదికాండము 29 : 23 (ERVTE)
ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು.
ఆదికాండము 29 : 24 (ERVTE)
(ಲಾಬಾನನು ತನ್ನ ಸೇವಕಿಯಾದ ಜಿಲ್ಪಾಳನ್ನು ತನ್ನ ಮಗಳಿಗೆ ಸೇವಕಿಯನ್ನಾಗಿ ಕೊಟ್ಟನು.)
ఆదికాండము 29 : 25 (ERVTE)
ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.
ఆదికాండము 29 : 26 (ERVTE)
ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ.
ఆదికాండము 29 : 27 (ERVTE)
ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.
ఆదికాండము 29 : 28 (ERVTE)
ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು.
ఆదికాండము 29 : 29 (ERVTE)
(ಲಾಬಾನನು ತನ್ನ ಸೇವಕಿಯಾದ ಬಿಲ್ಹಾಳನ್ನು ತನ್ನ ಮಗಳಾದ ರಾಹೇಲಳಿಗೆ ಸೇವಕಿಯನ್ನಾಗಿ ಕೊಟ್ಟನು.)
ఆదికాండము 29 : 30 (ERVTE)
ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.
ఆదికాండము 29 : 31 (ERVTE)
{#1ಯಾಕೋಬನ ಕುಟುಂಬದ ಅಭಿವೃದ್ಧಿ }
ఆదికాండము 29 : 32 (ERVTE)
ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.
ఆదికాండము 29 : 33 (ERVTE)
ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
ఆదికాండము 29 : 34 (ERVTE)
ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.
ఆదికాండము 29 : 35 (ERVTE)
ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು. ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.
❮
❯