ఆదికాండము 39 : 1 (ERVTE)
{#1ಈಜಿಪ್ಟಿನಲ್ಲಿ ಯೋಸೇಫನನ್ನು ಪೋಟೀಫರನಿಗೆ ಮಾರಿದ್ದು } ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.
ఆదికాండము 39 : 2 (ERVTE)
ಆದರೆ ಯೆಹೋವನ ಸಹಾಯದಿಂದ ಯೋಸೇಫನು ಏಳಿಗೆಯಾಗಿ ತನ್ನ ಯಜಮಾನನಾದ ಈಜಿಪ್ಟಿನ ಪೋಟೀಫರನ ಮನೆಯಲ್ಲಿ ಸೇವಕನಾದನು.
ఆదికాండము 39 : 3 (ERVTE)
ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.
ఆదికాండము 39 : 4 (ERVTE)
ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.
ఆదికాండము 39 : 5 (ERVTE)
ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.
ఆదికాండము 39 : 6 (ERVTE)
ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. {#1ಯೋಸೇಫನು ಪೋಟೀಫರನ ಹೆಂಡತಿಯನ್ನು ತಿರಸ್ಕರಿಸಿದ್ದು } ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.
ఆదికాండము 39 : 7 (ERVTE)
ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು.
ఆదికాండము 39 : 8 (ERVTE)
ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.
ఆదికాండము 39 : 9 (ERVTE)
ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.
ఆదికాండము 39 : 10 (ERVTE)
ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.
ఆదికాండము 39 : 11 (ERVTE)
ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ.
ఆదికాండము 39 : 12 (ERVTE)
ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.
ఆదికాండము 39 : 13 (ERVTE)
ಯೋಸೇಫನು ತನ್ನ ಮೇಲಂಗಿಯನ್ನು ಬಿಟ್ಟು ಓಡಿಹೋದದ್ದರಿಂದ ಸಿಟ್ಟುಗೊಂಡ ಅವಳು
ఆదికాండము 39 : 14 (ERVTE)
ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.
ఆదికాండము 39 : 15 (ERVTE)
ನನ್ನ ಕೂಗಿನಿಂದ ಭಯಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.
ఆదికాండము 39 : 16 (ERVTE)
ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು.
ఆదికాండము 39 : 17 (ERVTE)
ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಈ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ.
ఆదికాండము 39 : 18 (ERVTE)
ಆದರೆ ನಾನು ಕೂಗಿಕೊಂಡದ್ದರಿಂದ ಅವನು ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.
ఆదికాండము 39 : 19 (ERVTE)
ಯೋಸೇಫನ ಧಣಿಯು ತನ್ನ ಹೆಂಡತಿಯ ಮಾತು ಕೇಳಿ ತುಂಬ ಕೋಪಗೊಂಡನು.
ఆదికాండము 39 : 20 (ERVTE)
ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.
ఆదికాండము 39 : 21 (ERVTE)
{#1ಯೋಸೇಫನಿಗೆ ಸೆರೆವಾಸ } ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.
ఆదికాండము 39 : 22 (ERVTE)
ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು.
ఆదికాండము 39 : 23 (ERVTE)
ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23