ఆదికాండము 9 : 1 (ERVTE)
{#1ಹೊಸ ಪ್ರಾರಂಭ } ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ.
ఆదికాండము 9 : 2 (ERVTE)
ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.
ఆదికాండము 9 : 3 (ERVTE)
ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.
ఆదికాండము 9 : 4 (ERVTE)
ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.
ఆదికాండము 9 : 5 (ERVTE)
ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
ఆదికాండము 9 : 6 (ERVTE)
“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”
ఆదికాండము 9 : 7 (ERVTE)
ఆదికాండము 9 : 8 (ERVTE)
“ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು. (8-9)ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ.
ఆదికాండము 9 : 9 (ERVTE)
ఆదికాండము 9 : 10 (ERVTE)
ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.
ఆదికాండము 9 : 11 (ERVTE)
ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
ఆదికాండము 9 : 12 (ERVTE)
ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.
ఆదికాండము 9 : 13 (ERVTE)
ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.
ఆదికాండము 9 : 14 (ERVTE)
ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ.
ఆదికాండము 9 : 15 (ERVTE)
ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.
ఆదికాండము 9 : 16 (ERVTE)
ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
ఆదికాండము 9 : 17 (ERVTE)
ఆదికాండము 9 : 18 (ERVTE)
ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು. {#1ಸಮಸ್ಯೆಗಳ ಪ್ರಾರಂಭ } ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.)
ఆదికాండము 9 : 19 (ERVTE)
ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರಷರು.
ఆదికాండము 9 : 20 (ERVTE)
ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು.
ఆదికాండము 9 : 21 (ERVTE)
ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.
ఆదికాండము 9 : 22 (ERVTE)
ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.
ఆదికాండము 9 : 23 (ERVTE)
ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.
ఆదికాండము 9 : 24 (ERVTE)
ಆಮೇಲೆ ನೋಹನು ಎಚ್ಚರಗೊಂಡನು. ಕಿರಿಮಗನಾದ ಹಾಮನು ಏನು ಮಾಡಿದನು ಎಂದು ಅವನಿಗೆ ತಿಳಿಯಿತು.
ఆదికాండము 9 : 25 (ERVTE)
ಆದ್ದರಿಂದ ನೋಹನು, “ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.
ఆదికాండము 9 : 26 (ERVTE)
ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.
ఆదికాండము 9 : 27 (ERVTE)
ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.
ఆదికాండము 9 : 28 (ERVTE)
ಜಲಪ್ರಳಯದ ನಂತರ ನೋಹನು ಮುನ್ನೂರೈವತ್ತು ವರ್ಷ ಬದುಕಿದ್ದನು.
ఆదికాండము 9 : 29 (ERVTE)
ನೋಹನು ಒಟ್ಟು ಒಂಭೈನೂರೈವತ್ತು ವರ್ಷ ಬದುಕಿ ಸತ್ತನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29