హబక్కూకు 1 : 1 (ERVTE)
{#1ಯೆಹೋವನಿಗೆ ಹಬಕ್ಕೂಕನ ದೂರು }
హబక్కూకు 1 : 2 (ERVTE)
ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ. ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವೆ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
హబక్కూకు 1 : 3 (ERVTE)
ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.
హబక్కూకు 1 : 4 (ERVTE)
ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.
హబక్కూకు 1 : 5 (ERVTE)
{#1ಹಬಕ್ಕೂಕನಿಗೆ ದೇವರ ಉತ್ತರ } ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.
హబక్కూకు 1 : 6 (ERVTE)
ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.
హబక్కూకు 1 : 7 (ERVTE)
ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.
హబక్కూకు 1 : 8 (ERVTE)
ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.
హబక్కూకు 1 : 9 (ERVTE)
ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.
హబక్కూకు 1 : 10 (ERVTE)
“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
హబక్కూకు 1 : 11 (ERVTE)
ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”
హబక్కూకు 1 : 12 (ERVTE)
{#1ಹಬಕ್ಕೂಕನ ಎರಡನೇ ದೂರು } ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.
హబక్కూకు 1 : 13 (ERVTE)
ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?
హబక్కూకు 1 : 14 (ERVTE)
“ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿರುವೆ. ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ,
హబక్కూకు 1 : 15 (ERVTE)
ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.
హబక్కూకు 1 : 16 (ERVTE)
ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.
హబక్కూకు 1 : 17 (ERVTE)
ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?

1 2 3 4 5 6 7 8 9 10 11 12 13 14 15 16 17