హగ్గయి 2 : 1 (ERVTE)
{#1ಯೆಹೋವನ ಉತ್ತೇಜನ; ಕೆಲಸದ ಪ್ರಾರಂಭ } ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಈ ಸಂದೇಶವು ದೊರಕಿತು:
హగ్గయి 2 : 2 (ERVTE)
“ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.
హగ్గయి 2 : 3 (ERVTE)
‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
హగ్గయి 2 : 4 (ERVTE)
ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’ ” ಇದು ಸರ್ವಶಕ್ತನಾದ ಯೆಹೋವನ ನುಡಿ.
హగ్గయి 2 : 5 (ERVTE)
ಯೆಹೋವನು ಹೇಳುವುದೇನೆಂದರೆ, “ ‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’
హగ్గయి 2 : 6 (ERVTE)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,
హగ్గయి 2 : 7 (ERVTE)
ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
హగ్గయి 2 : 8 (ERVTE)
‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.
హగ్గయి 2 : 9 (ERVTE)
‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
హగ్గయి 2 : 10 (ERVTE)
ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.
హగ్గయి 2 : 11 (ERVTE)
“ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.
హగ్గయి 2 : 12 (ERVTE)
‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’ ”
హగ్గయి 2 : 13 (ERVTE)
ಯಾಜಕರು ಉತ್ತರವಾಗಿ, “ಇಲ್ಲ” ಎಂದರು.
హగ్గయి 2 : 14 (ERVTE)
ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.
హగ్గయి 2 : 15 (ERVTE)
ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು. “ ‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.
హగ్గయి 2 : 16 (ERVTE)
ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
హగ్గయి 2 : 17 (ERVTE)
ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”
హగ్గయి 2 : 18 (ERVTE)
ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.
హగ్గయి 2 : 19 (ERVTE)
ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”
హగ్గయి 2 : 20 (ERVTE)
ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:
హగ్గయి 2 : 21 (ERVTE)
“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.
హగ్గయి 2 : 22 (ERVTE)
ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”
హగ్గయి 2 : 23 (ERVTE)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23