హెబ్రీయులకు 1 : 1 (ERVTE)
{#1ದೇವರು ತನ್ನ ಮಗನ ಮೂಲಕ ಮಾತನಾಡಿದನು } ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.
హెబ్రీయులకు 1 : 2 (ERVTE)
ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
హెబ్రీయులకు 1 : 3 (ERVTE)
ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
హెబ్రీయులకు 1 : 4 (ERVTE)
ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.
హెబ్రీయులకు 1 : 5 (ERVTE)
ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” --ಕೀರ್ತನೆ. 2:7-- ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.” --2 ಸಮುವೇಲ 7:14--
హెబ్రీయులకు 1 : 6 (ERVTE)
6 ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.” --ಧರ್ಮೋಪದೇಶ. 32:43--
హెబ్రీయులకు 1 : 7 (ERVTE)
7 ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.” --ಕೀರ್ತನೆ. 104:4--
హెబ్రీయులకు 1 : 8 (ERVTE)
8 ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.
హెబ్రీయులకు 1 : 9 (ERVTE)
ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.” --ಕೀರ್ತನೆ. 45:6-7--
హెబ్రీయులకు 1 : 10 (ERVTE)
10 ಇದಲ್ಲದೆ ದೇವರು ಹೀಗೆನ್ನುತ್ತಾನೆ: “ಪ್ರಭುವೇ, ಆದಿಯಲ್ಲಿ ನೀನು ಈ ಲೋಕವನ್ನು ಸೃಷ್ಟಿಸಿದೆ. ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
హెబ్రీయులకు 1 : 11 (ERVTE)
ಇವೆಲ್ಲವು ನಾಶವಾಗುತ್ತವೆ, ಆದರೆ ನೀನು ಶಾಶ್ವತವಾಗಿರುವೆ. ಎಲ್ಲಾ ವಸ್ತುಗಳೂ ವಸ್ತ್ರಗಳಂತೆ ಹಳೆಯವಾಗುವವು.
హెబ్రీయులకు 1 : 12 (ERVTE)
ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ. ಅವು ವಸ್ತ್ರಗಳಂತೆ ಬದಲಾಗುತ್ತವೆ. ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ. ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ.” --ಕೀರ್ತನೆ. 102:25-27--
హెబ్రీయులకు 1 : 13 (ERVTE)
13 ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.” --ಕೀರ್ತನೆ. 110:1--
హెబ్రీయులకు 1 : 14 (ERVTE)
14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.

1 2 3 4 5 6 7 8 9 10 11 12 13 14