హెబ్రీయులకు 3 : 1 (ERVTE)
{#1ಯೇಸು ಮೋಶೆಗಿಂತ ಶ್ರೇಷ್ಠನು } ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.
హెబ్రీయులకు 3 : 2 (ERVTE)
ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.
హెబ్రీయులకు 3 : 3 (ERVTE)
ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.
హెబ్రీయులకు 3 : 4 (ERVTE)
ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು.
హెబ్రీయులకు 3 : 5 (ERVTE)
ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು.
హెబ్రీయులకు 3 : 6 (ERVTE)
ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.
హెబ్రీయులకు 3 : 7 (ERVTE)
{#1ನಾವು ದೇವರನ್ನು ಅನುಸರಿಸಲೇಬೇಕು } ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
హెబ్రీయులకు 3 : 8 (ERVTE)
ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.
హెబ్రీయులకు 3 : 9 (ERVTE)
ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.
హెబ్రీయులకు 3 : 10 (ERVTE)
ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.
హెబ్రీయులకు 3 : 11 (ERVTE)
‘ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ’ ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” --ಕೀರ್ತನೆ. 95:7-11--
హెబ్రీయులకు 3 : 12 (ERVTE)
ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.
హెబ్రీయులకు 3 : 13 (ERVTE)
ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
హెబ్రీయులకు 3 : 14 (ERVTE)
ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.
హెబ్రీయులకు 3 : 15 (ERVTE)
ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” --ಕೀರ್ತನೆ 95:7-8--
హెబ్రీయులకు 3 : 16 (ERVTE)
ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?
హెబ్రీయులకు 3 : 17 (ERVTE)
ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.
హెబ్రీయులకు 3 : 18 (ERVTE)
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?
హెబ్రీయులకు 3 : 19 (ERVTE)
ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19