హెబ్రీయులకు 6 : 1 (ERVTE)
ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.
హెబ్రీయులకు 6 : 2 (ERVTE)
ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.
హెబ్రీయులకు 6 : 3 (ERVTE)
ದೇವರ ಚಿತ್ತವಾದರೆ ಹೀಗೆ ಮುಂದಕ್ಕೆ ಸಾಗುತ್ತಾ ಹೋಗುವೆವು.
హెబ్రీయులకు 6 : 4 (ERVTE)
హెబ్రీయులకు 6 : 5 (ERVTE)
(4-6)ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
హెబ్రీయులకు 6 : 6 (ERVTE)
హెబ్రీయులకు 6 : 7 (ERVTE)
ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
హెబ్రీయులకు 6 : 8 (ERVTE)
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.
హెబ్రీయులకు 6 : 9 (ERVTE)
ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.
హెబ్రీయులకు 6 : 10 (ERVTE)
ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.
హెబ్రీయులకు 6 : 11 (ERVTE)
ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
హెబ్రీయులకు 6 : 12 (ERVTE)
ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
హెబ్రీయులకు 6 : 13 (ERVTE)
ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.
హెబ్రీయులకు 6 : 14 (ERVTE)
ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು”[✡ ಉಲ್ಲೇಖನ: ಆದಿಕಾಂಡ 22: 17 ] ಎಂದು ಹೇಳಿದನು.
హెబ్రీయులకు 6 : 15 (ERVTE)
ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.
హెబ్రీయులకు 6 : 16 (ERVTE)
ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
హెబ్రీయులకు 6 : 17 (ERVTE)
ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
హెబ్రీయులకు 6 : 18 (ERVTE)
ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
హెబ్రీయులకు 6 : 19 (ERVTE)
ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
హెబ్రీయులకు 6 : 20 (ERVTE)
ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.
❮
❯
1
2
3
4
5
6
7
8
9
10
11
12
13
14
15
16
17
18
19
20