హొషేయ 10 : 1 (ERVTE)
{#1ಇಸ್ರೇಲರು ಧನಿಕರಾದುದರಿಂದ ವಿಗ್ರಹಾರಾಧನೆಗೆ ನಡಿಸಲ್ಪಟ್ಟರು } ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.
హొషేయ 10 : 2 (ERVTE)
ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.
హొషేయ 10 : 3 (ERVTE)
{#1ಇಸ್ರೇಲರ ದುಷ್ಟ ಯೋಜನೆಗಳು }
హొషేయ 10 : 4 (ERVTE)
ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”
హొషేయ 10 : 5 (ERVTE)
ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. [+ ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ]. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ. ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.
హొషేయ 10 : 6 (ERVTE)
ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.
హొషేయ 10 : 7 (ERVTE)
ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.
హొషేయ 10 : 8 (ERVTE)
హొషేయ 10 : 9 (ERVTE)
ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು. {#1ಇಸ್ರೇಲ್ ತನ್ನ ಪಾಪದ ಪ್ರತಿಫಲವನ್ನು ಅನುಭವಿಸುವದು } “ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.
హొషేయ 10 : 10 (ERVTE)
ಅವರನ್ನು ಶಿಕ್ಷಿಸಲು ನಾನು ಬರುವೆನು. ಸೈನ್ಯಗಳು ಒಟ್ಟಾಗಿ ಅವರಿಗೆ ವಿರುದ್ಧವಾಗಿ ಬರುವವು. ಅವರು ಬಂದು ಇಸ್ರೇಲರನ್ನು ಅವರಿಬ್ಬರ ಪಾಪಗಳಿಗಾಗಿ ಶಿಕ್ಷಿಸುವರು.
హొషేయ 10 : 11 (ERVTE)
హొషేయ 10 : 12 (ERVTE)
“ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.”
హొషేయ 10 : 13 (ERVTE)
ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವಿ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು. ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.
హొషేయ 10 : 14 (ERVTE)
ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.
హొషేయ 10 : 15 (ERVTE)
ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

1 2 3 4 5 6 7 8 9 10 11 12 13 14 15