హొషేయ 11 : 1 (ERVTE)
{#1ಇಸ್ರೇಲು ಯೆಹೋವನನ್ನು ಮರೆತುಬಿಟ್ಟಿದೆ } “ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.
హొషేయ 11 : 2 (ERVTE)
ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.
హొషేయ 11 : 3 (ERVTE)
“ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.
హొషేయ 11 : 4 (ERVTE)
ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.
హొషేయ 11 : 5 (ERVTE)
“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.
హొషేయ 11 : 6 (ERVTE)
ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.
హొషేయ 11 : 8 (ERVTE)
“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.” {#1ಇಸ್ರೇಲನ್ನು ನಾಶಮಾಡಲು ಯೆಹೋವನು ಇಷ್ಟಪಡುವದಿಲ್ಲ } “ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.
హొషేయ 11 : 9 (ERVTE)
ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.
హొషేయ 11 : 10 (ERVTE)
ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.
హొషేయ 11 : 11 (ERVTE)
ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.
హొషేయ 11 : 12 (ERVTE)
“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”
❮
❯
1
2
3
4
5
6
7
8
9
10
11
12