హొషేయ 6 : 1 (ERVTE)
{#1ಯೆಹೋವನ ಬಳಿಗೆ ಹಿಂತಿರುಗಿ ಬರುವಾಗ ದೊರಕುವ ಬಹುಮಾನ } “ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.
హొషేయ 6 : 2 (ERVTE)
ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.
హొషేయ 6 : 3 (ERVTE)
ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”
హొషేయ 6 : 4 (ERVTE)
{#1ಜನರು ನಿಷ್ಠಾವಂತರಲ್ಲ } “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.
హొషేయ 6 : 5 (ERVTE)
ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.
హొషేయ 6 : 6 (ERVTE)
ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.
హొషేయ 6 : 7 (ERVTE)
ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.
హొషేయ 6 : 8 (ERVTE)
ಗಿಲ್ಯಾದು ಕೆಟ್ಟತನವನ್ನು ನಡಿಸುವ ಜನರಿಂದ ಕೂಡಿದ ನಗರವಾಗಿದೆ. ಜನರು ಇತರರನ್ನು ಮೋಸಗೊಳಿಸಿ ಕೊಲೆಮಾಡಿರುತ್ತಾರೆ.
హొషేయ 6 : 9 (ERVTE)
ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.
హొషేయ 6 : 10 (ERVTE)
ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.
హొషేయ 6 : 11 (ERVTE)
ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.
❮
❯
1
2
3
4
5
6
7
8
9
10
11