హొషేయ 7 : 1 (ERVTE)
“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.
హొషేయ 7 : 2 (ERVTE)
ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.
హొషేయ 7 : 3 (ERVTE)
ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುತ್ತದೆ. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.
హొషేయ 7 : 4 (ERVTE)
ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೋ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.
హొషేయ 7 : 5 (ERVTE)
ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.
హొషేయ 7 : 6 (ERVTE)
ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು.
హొషేయ 7 : 7 (ERVTE)
ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”
హొషేయ 7 : 8 (ERVTE)
{#1ತಾನು ನಾಶವಾಗುತ್ತೇನೆಂದು ಇಸ್ರೇಲಿಗೆ ಗೊತ್ತಿಲ್ಲ } “ಎಫ್ರಾಯೀಮು ಬೇರೆ ದೇಶಗಳೊಂದಿಗೆ ಬೆರೆತುಹೋಗುತ್ತದೆ. ಎಫ್ರಾಯೀಮು ತಿರುವಿಹಾಕದ ಚಪಾತಿಯಂತಿದೆ.
హొషేయ 7 : 9 (ERVTE)
ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.
హొషేయ 7 : 10 (ERVTE)
ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.
హొషేయ 7 : 11 (ERVTE)
ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.
హొషేయ 7 : 12 (ERVTE)
ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.
హొషేయ 7 : 13 (ERVTE)
ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.
హొషేయ 7 : 14 (ERVTE)
ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.
హొషేయ 7 : 15 (ERVTE)
ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.
హొషేయ 7 : 16 (ERVTE)
ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.
❮
❯
1
2
3
4
5
6
7
8
9
10
11
12
13
14
15
16