హొషేయ 9 : 1 (ERVTE)
{#1ಸೆರೆವಾಸದ ದುಃಖ } ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.
హొషేయ 9 : 2 (ERVTE)
ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.
హొషేయ 9 : 3 (ERVTE)
ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.
హొషేయ 9 : 4 (ERVTE)
ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.
హొషేయ 9 : 5 (ERVTE)
ಯೆಹೋವನ ಹಬ್ಬಗಳನ್ನಾಗಲಿ ವಿಶ್ರಾಂತಿ ದಿನವನ್ನಾಗಲಿ ಅವರಿಗೆ ಆಚರಿಸಲಾಗದು.
హొషేయ 9 : 7 (ERVTE)
ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು. {#1ನಿಜ ಪ್ರವಾದಿಗಳನ್ನು ಇಸ್ರೇಲ್ ನಿರಾಕರಿಸಿದರು } ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
హొషేయ 9 : 8 (ERVTE)
ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.
హొషేయ 9 : 10 (ERVTE)
ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು. {#1ವಿಗ್ರಹಾರಾಧನೆಯಿಂದ ಇಸ್ರೇಲ್ ನಾಶವಾಗುತ್ತಿದೆ }
హొషేయ 9 : 11 (ERVTE)
“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು. {#1ಇಸ್ರೇಲರಿಗೆ ಸಂತಾನವೃದ್ಧಿಯಾಗದು } “ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.
హొషేయ 9 : 12 (ERVTE)
ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”
హొషేయ 9 : 13 (ERVTE)
ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.
హొషేయ 9 : 14 (ERVTE)
ಯೆಹೋವನೇ, ನಿನ್ನ ಇಚ್ಛೆಯ ಪ್ರಕಾರ ಅವರಿಗೆ ಕೊಡು. ಮಗುವನ್ನು ಹೆರಲಾರದ ಗರ್ಭವನ್ನು ಅವರಿಗೆ ಕೊಡು. ಮೊಲೆಹಾಲು ಉಣಿಸಲಾರದ ಸ್ತನಗಳನ್ನು ಅವರಿಗೆ ಕೊಡು.
హొషేయ 9 : 15 (ERVTE)
ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.
హొషేయ 9 : 16 (ERVTE)
ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.
హొషేయ 9 : 17 (ERVTE)
ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.
❮
❯
1
2
3
4
5
6
7
8
9
10
11
12
13
14
15
16
17