యెషయా గ్రంథము 21 : 1 (ERVTE)
{#1ಬಾಬಿಲೋನಿಗೆ ದೇವರ ಸಂದೇಶ } ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.
యెషయా గ్రంథము 21 : 2 (ERVTE)
ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
యెషయా గ్రంథము 21 : 3 (ERVTE)
ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
యెషయా గ్రంథము 21 : 4 (ERVTE)
ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.
యెషయా గ్రంథము 21 : 5 (ERVTE)
ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.
యెషయా గ్రంథము 21 : 6 (ERVTE)
ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
యెషయా గ్రంథము 21 : 7 (ERVTE)
ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.”
యెషయా గ్రంథము 21 : 8 (ERVTE)
ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;
యెషయా గ్రంథము 21 : 9 (ERVTE)
ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.
యెషయా గ్రంథము 21 : 10 (ERVTE)
యెషయా గ్రంథము 21 : 11 (ERVTE)
ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ. {#1ಎದೋಮಿಗೆ ದೇವರ ಸಂದೇಶ } ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.
యెషయా గ్రంథము 21 : 12 (ERVTE)
ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.
యెషయా గ్రంథము 21 : 13 (ERVTE)
{#1ಅರೇಬಿಯಕ್ಕೆ ದೇವರ ಸಂದೇಶ } ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.
యెషయా గ్రంథము 21 : 14 (ERVTE)
ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು.
యెషయా గ్రంథము 21 : 15 (ERVTE)
ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.
యెషయా గ్రంథము 21 : 16 (ERVTE)
ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
యెషయా గ్రంథము 21 : 17 (ERVTE)
ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.
❮
❯
1
2
3
4
5
6
7
8
9
10
11
12
13
14
15
16
17