యెషయా గ్రంథము 22 : 1 (ERVTE)
{#1ಜೆರುಸಲೇಮಿಗೆ ದೇವರ ಸಂದೇಶ } ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?
యెషయా గ్రంథము 22 : 2 (ERVTE)
ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.
యెషయా గ్రంథము 22 : 3 (ERVTE)
ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.
యెషయా గ్రంథము 22 : 4 (ERVTE)
ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”
యెషయా గ్రంథము 22 : 5 (ERVTE)
ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.
యెషయా గ్రంథము 22 : 6 (ERVTE)
ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.
యెషయా గ్రంథము 22 : 7 (ERVTE)
ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.
యెషయా గ్రంథము 22 : 8 (ERVTE)
ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು. ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿಹಾಕುವರು.
యెషయా గ్రంథము 22 : 9 (ERVTE)
(9-11)ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲಿವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.
యెషయా గ్రంథము 22 : 10 (ERVTE)
యెషయా గ్రంథము 22 : 11 (ERVTE)
యెషయా గ్రంథము 22 : 12 (ERVTE)
ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರವನ್ನು ಧರಿಸುವರು.
యెషయా గ్రంథము 22 : 13 (ERVTE)
ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.
యెషయా గ్రంథము 22 : 14 (ERVTE)
యెషయా గ్రంథము 22 : 15 (ERVTE)
ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು. {#1ಶೆಬ್ನಕ್ಕೆ ದೇವರ ಸಂದೇಶ } ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.
యెషయా గ్రంథము 22 : 16 (ERVTE)
ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’ ” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.
యెషయా గ్రంథము 22 : 17 (ERVTE)
(17-18)“ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ.
యెషయా గ్రంథము 22 : 18 (ERVTE)
యెషయా గ్రంథము 22 : 19 (ERVTE)
ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದುಬಿಡುವನು.
యెషయా గ్రంథము 22 : 20 (ERVTE)
ಆ ಸಮಯದಲ್ಲಿ ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ನಾನು ಕರೆಯುವೆನು.
యెషయా గ్రంథము 22 : 21 (ERVTE)
ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.
యెషయా గ్రంథము 22 : 22 (ERVTE)
“ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ.
యెషయా గ్రంథము 22 : 23 (ERVTE)
ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವಪೀಠದಂತಿರುವನು.
యెషయా గ్రంథము 22 : 24 (ERVTE)
ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”
యెషయా గ్రంథము 22 : 25 (ERVTE)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25