యెషయా గ్రంథము 29 : 1 (ERVTE)
{#1ಜೆರುಸಲೇಮಿನ ಮೇಲೆ ದೇವರ ಪ್ರೀತಿ } [+ ದೇವರು ಹೇಳುವುದೇನೆಂದರೆ,] “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.
యెషయా గ్రంథము 29 : 2 (ERVTE)
ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.
యెషయా గ్రంథము 29 : 3 (ERVTE)
“ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ.
యెషయా గ్రంథము 29 : 4 (ERVTE)
ನೀನು ಸೋತುಹೋಗಿರುವೆ ಮತ್ತು ನೆಲದ ಮೇಲೆ ಕೆಡವಲ್ಪಟ್ಟಿರುವೆ. ಈಗ ನಿನ್ನ ಸ್ವರವು ಪ್ರೇತದ ಸ್ವರದಂತೆ ನನಗೆ ಕೇಳಿಸುತ್ತದೆ. ಅದು ಬಲಹೀನವಾದ ಸ್ವರವಾಗಿದೆ.”
యెషయా గ్రంథము 29 : 5 (ERVTE)
ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.
యెషయా గ్రంథము 29 : 6 (ERVTE)
ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.
యెషయా గ్రంథము 29 : 7 (ERVTE)
ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್‌ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.
యెషయా గ్రంథము 29 : 8 (ERVTE)
ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.
యెషయా గ్రంథము 29 : 9 (ERVTE)
ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.
యెషయా గ్రంథము 29 : 10 (ERVTE)
ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)
యెషయా గ్రంథము 29 : 11 (ERVTE)
ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು.
యెషయా గ్రంథము 29 : 12 (ERVTE)
ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.
యెషయా గ్రంథము 29 : 13 (ERVTE)
ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.
యెషయా గ్రంథము 29 : 14 (ERVTE)
ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”
యెషయా గ్రంథము 29 : 15 (ERVTE)
యెషయా గ్రంథము 29 : 16 (ERVTE)
ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.
యెషయా గ్రంథము 29 : 17 (ERVTE)
ನೀವು ಗಲಿಬಿಲಿಗೊಂಡಿದ್ದೀರಿ. ಜೇಡಿಮಣ್ಣು ಕುಂಬಾರನಿಗೆ ಸಮಾನವಾಗಿದೆ ಎಂದು ಯೋಚಿಸುತ್ತೀರಿ. ಒಂದು ವಸ್ತು ಅದರ ನಿರ್ಮಾಣಿಕನಿಗೆ, “ನೀನು ನನ್ನನ್ನು ನಿರ್ಮಿಸಲಿಲ್ಲ” ಎಂದು ಕೇಳಬಹುದು ಎಂದು ನೆನಸುತ್ತೀರಿ. ಒಂದು ಮಡಿಕೆಯು ಅದನ್ನು ಮಾಡಿದವನಿಗೆ, “ನಿನಗೆ ಏನೂ ಗೊತ್ತಿಲ್ಲ” ಎಂದು ಹೇಳಿದ ಹಾಗಾಯಿತು. {#1ಒಳ್ಳೆಯ ಸಮಯವು ಬರುತ್ತಿದೆ } ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.
యెషయా గ్రంథము 29 : 18 (ERVTE)
ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.
యెషయా గ్రంథము 29 : 19 (ERVTE)
ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.
యెషయా గ్రంథము 29 : 20 (ERVTE)
ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.
యెషయా గ్రంథము 29 : 21 (ERVTE)
(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)
యెషయా గ్రంథము 29 : 22 (ERVTE)
ಯೆಹೋವನು ಯಾಕೋಬನ ವಂಶಕ್ಕೆ ಹೀಗೆನ್ನುತ್ತಾನೆ: “ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು. ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.
యెషయా గ్రంథము 29 : 23 (ERVTE)
ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.
యెషయా గ్రంథము 29 : 24 (ERVTE)
ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”

1 2 3 4 5 6 7 8 9 10 11 12 13 14 15 16 17 18 19 20 21 22 23 24