యెషయా గ్రంథము 42 : 1 (ERVTE)
{#1ಯೆಹೋವನ ವಿಶೇಷ ಸೇವಕನು } “ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.
యెషయా గ్రంథము 42 : 2 (ERVTE)
ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.
యెషయా గ్రంథము 42 : 3 (ERVTE)
ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡುಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆಮಾಡಿ ಸತ್ಯವನ್ನು ಕಂಡುಕೊಳ್ಳುವನು.
యెషయా గ్రంథము 42 : 4 (ERVTE)
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”
యెషయా గ్రంథము 42 : 5 (ERVTE)
{#1ಯೆಹೋವನೇ ಸೃಷ್ಟಿಕರ್ತ ಮತ್ತು ಆಡಳಿತಗಾರ } ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: “ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.
యెషయా గ్రంథము 42 : 6 (ERVTE)
“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.
యెషయా గ్రంథము 42 : 7 (ERVTE)
ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.
యెషయా గ్రంథము 42 : 8 (ERVTE)
“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.
యెషయా గ్రంథము 42 : 9 (ERVTE)
ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”
యెషయా గ్రంథము 42 : 10 (ERVTE)
{#1ದೇವರಿಗೆ ಸ್ತೋತ್ರಗಾನ } ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.
యెషయా గ్రంథము 42 : 11 (ERVTE)
ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.
యెషయా గ్రంథము 42 : 12 (ERVTE)
ಯೆಹೋವನನ್ನು ಘನಪಡಿಸಿರಿ. ದೂರದೇಶಗಳ ಜನರೆಲ್ಲರೇ, ಆತನನ್ನು ಸ್ತುತಿಸಿರಿ.
యెషయా గ్రంథము 42 : 13 (ERVTE)
ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.
యెషయా గ్రంథము 42 : 14 (ERVTE)
{#1ದೇವರು ತಾಳ್ಮೆಯುಳ್ಳವನಾಗಿದ್ದಾನೆ } “ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.
యెషయా గ్రంథము 42 : 15 (ERVTE)
ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.
యెషయా గ్రంథము 42 : 16 (ERVTE)
ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.
యెషయా గ్రంథము 42 : 17 (ERVTE)
ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.
యెషయా గ్రంథము 42 : 18 (ERVTE)
{#1ದೇವರಿಗೆ ವಿಧೇಯರಾಗಲು ಇಸ್ರೇಲರು ನಿರಾಕರಿಸಿದರು } “ಕಿವುಡರೇ, ನನ್ನ ಮಾತನ್ನು ಕೇಳಿರಿ. ಕುರುಡರೇ ನನ್ನ ಕಡೆಗೆ ನೋಡಿರಿ.
యెషయా గ్రంథము 42 : 19 (ERVTE)
ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.
యెషయా గ్రంథము 42 : 20 (ERVTE)
ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”
యెషయా గ్రంథము 42 : 21 (ERVTE)
ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.
యెషయా గ్రంథము 42 : 22 (ERVTE)
ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.
యెషయా గ్రంథము 42 : 23 (ERVTE)
ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.
యెషయా గ్రంథము 42 : 24 (ERVTE)
ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.
యెషయా గ్రంథము 42 : 25 (ERVTE)
ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25