యెషయా గ్రంథము 44 : 1 (ERVTE)
{#1ಯೆಹೋವನೇ ದೇವರು } “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು.
యెషయా గ్రంథము 44 : 2 (ERVTE)
ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.
యెషయా గ్రంథము 44 : 3 (ERVTE)
“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.
యెషయా గ్రంథము 44 : 4 (ERVTE)
ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.
యెషయా గ్రంథము 44 : 5 (ERVTE)
యెషయా గ్రంథము 44 : 6 (ERVTE)
“ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.” ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.
యెషయా గ్రంథము 44 : 7 (ERVTE)
ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.
యెషయా గ్రంథము 44 : 8 (ERVTE)
యెషయా గ్రంథము 44 : 9 (ERVTE)
“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!” {#1ಸುಳ್ಳುದೇವರುಗಳು ಪ್ರಯೋಜನಕ್ಕೆ ಬಾರದವುಗಳು }
యెషయా గ్రంథము 44 : 10 (ERVTE)
ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ. ಈ ಸುಳ್ಳುದೇವರುಗಳನ್ನು ಮಾಡಿದವರ್ಯಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರ್ಯಾರು?
యెషయా గ్రంథము 44 : 11 (ERVTE)
ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.
యెషయా గ్రంథము 44 : 12 (ERVTE)
యెషయా గ్రంథము 44 : 13 (ERVTE)
ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.
యెషయా గ్రంథము 44 : 14 (ERVTE)
ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.
యెషయా గ్రంథము 44 : 15 (ERVTE)
ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.) ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.
యెషయా గ్రంథము 44 : 16 (ERVTE)
ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.
యెషయా గ్రంథము 44 : 17 (ERVTE)
ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.
యెషయా గ్రంథము 44 : 18 (ERVTE)
ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.
యెషయా గ్రంథము 44 : 19 (ERVTE)
“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.
యెషయా గ్రంథము 44 : 20 (ERVTE)
యెషయా గ్రంథము 44 : 21 (ERVTE)
ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ. {#1ನಿಜದೇವರಾದ ಯೆಹೋವನು ಇಸ್ರೇಲರ ಸಹಾಯಕನು } “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.
యెషయా గ్రంథము 44 : 22 (ERVTE)
ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”
యెషయా గ్రంథము 44 : 23 (ERVTE)
ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.
యెషయా గ్రంథము 44 : 24 (ERVTE)
ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”
యెషయా గ్రంథము 44 : 25 (ERVTE)
ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.
యెషయా గ్రంథము 44 : 26 (ERVTE)
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. {#1ಯೆಹೂದದ ಪುನರ್ ನಿರ್ಮಾಣದಲ್ಲಿ ಸೈರಸನ ಪಾತ್ರ } ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
యెషయా గ్రంథము 44 : 27 (ERVTE)
ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.
యెషయా గ్రంథము 44 : 28 (ERVTE)
ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28