యెషయా గ్రంథము 54 : 1 (ERVTE)
{#1ದೇವರು ತನ್ನ ಜನರನ್ನು ಸ್ವದೇಶಕ್ಕೆ ಬರಮಾಡುವನು } ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”
యెషయా గ్రంథము 54 : 2 (ERVTE)
“ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.
యెషయా గ్రంథము 54 : 3 (ERVTE)
ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.
యెషయా గ్రంథము 54 : 4 (ERVTE)
ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.
యెషయా గ్రంథము 54 : 5 (ERVTE)
ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.
యెషయా గ్రంథము 54 : 6 (ERVTE)
“ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”
యెషయా గ్రంథము 54 : 7 (ERVTE)
ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.
యెషయా గ్రంథము 54 : 8 (ERVTE)
ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.
యెషయా గ్రంథము 54 : 9 (ERVTE)
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”
యెషయా గ్రంథము 54 : 10 (ERVTE)
ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.
యెషయా గ్రంథము 54 : 11 (ERVTE)
“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.
యెషయా గ్రంథము 54 : 12 (ERVTE)
ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು.
యెషయా గ్రంథము 54 : 13 (ERVTE)
ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.
యెషయా గ్రంథము 54 : 14 (ERVTE)
ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.
యెషయా గ్రంథము 54 : 15 (ERVTE)
ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.
యెషయా గ్రంథము 54 : 16 (ERVTE)
యెషయా గ్రంథము 54 : 17 (ERVTE)
“ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು. “ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.
❮
❯
1
2
3
4
5
6
7
8
9
10
11
12
13
14
15
16
17