యెషయా గ్రంథము 56 : 1 (ERVTE)
{#1ಎಲ್ಲಾ ಜನಾಂಗದವರು ಯೆಹೋವನನ್ನು ಅನುಸರಿಸುವರು } ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
యెషయా గ్రంథము 56 : 2 (ERVTE)
ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”
యెషయా గ్రంథము 56 : 3 (ERVTE)
యెషయా గ్రంథము 56 : 4 (ERVTE)
ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.
యెషయా గ్రంథము 56 : 5 (ERVTE)
(4-5)ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”
యెషయా గ్రంథము 56 : 6 (ERVTE)
“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.
యెషయా గ్రంథము 56 : 7 (ERVTE)
ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು: ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”
యెషయా గ్రంథము 56 : 8 (ERVTE)
ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
యెషయా గ్రంథము 56 : 9 (ERVTE)
ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!
యెషయా గ్రంథము 56 : 10 (ERVTE)
ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.
యెషయా గ్రంథము 56 : 11 (ERVTE)
ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.
యెషయా గ్రంథము 56 : 12 (ERVTE)
ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.
❮
❯
1
2
3
4
5
6
7
8
9
10
11
12