యిర్మీయా 10 : 1 (ERVTE)
{#1ಯೆಹೋವನು ಮತ್ತು ವಿಗ್ರಹಗಳು } ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.
యిర్మీయా 10 : 2 (ERVTE)
ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.
యిర్మీయా 10 : 3 (ERVTE)
ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.
యిర్మీయా 10 : 4 (ERVTE)
ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.
యిర్మీయా 10 : 5 (ERVTE)
ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
యిర్మీయా 10 : 6 (ERVTE)
ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.
యిర్మీయా 10 : 7 (ERVTE)
ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.
యిర్మీయా 10 : 8 (ERVTE)
ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.
యిర్మీయా 10 : 9 (ERVTE)
ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
యిర్మీయా 10 : 10 (ERVTE)
ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.
యిర్మీయా 10 : 11 (ERVTE)
ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ”
యిర్మీయా 10 : 12 (ERVTE)
ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.
యిర్మీయా 10 : 13 (ERVTE)
ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.
యిర్మీయా 10 : 14 (ERVTE)
ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.[* ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು. ]
యిర్మీయా 10 : 15 (ERVTE)
ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.
యిర్మీయా 10 : 16 (ERVTE)
ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.
యిర్మీయా 10 : 17 (ERVTE)
{#1ವಿನಾಶವು ಬರುತ್ತಿದೆ } ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ.
యిర్మీయా 10 : 18 (ERVTE)
ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
యిర్మీయా 10 : 19 (ERVTE)
ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.
యిర్మీయా 10 : 20 (ERVTE)
ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
యిర్మీయా 10 : 21 (ERVTE)
ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.
యిర్మీయా 10 : 22 (ERVTE)
ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.
యిర్మీయా 10 : 23 (ERVTE)
ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.
యిర్మీయా 10 : 24 (ERVTE)
ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.
యిర్మీయా 10 : 25 (ERVTE)
ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25