యిర్మీయా 24 : 1 (ERVTE)
{#1ಒಳ್ಳೆಯ ಮತ್ತು ಕೆಟ್ಟ ಅಂಜೂರದ ಹಣ್ಣುಗಳು } ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
యిర్మీయా 24 : 2 (ERVTE)
ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.
యిర్మీయా 24 : 4 (ERVTE)
ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ. ಆಗ ನನಗೆ ಯೆಹೋವನಿಂದ ಸಂದೇಶ ಬಂದಿತು.
యిర్మీయా 24 : 5 (ERVTE)
ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.
యిర్మీయా 24 : 6 (ERVTE)
ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.
యిర్మీయా 24 : 7 (ERVTE)
ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.
యిర్మీయా 24 : 8 (ERVTE)
“ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.
యిర్మీయా 24 : 9 (ERVTE)
ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.
యిర్మీయా 24 : 10 (ERVTE)
ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”
❮
❯
1
2
3
4
5
6
7
8
9
10