యిర్మీయా 30 : 1 (ERVTE)
{#1ಆಶಾದಾಯಕವಾದ ವಾಗ್ದಾನಗಳು } ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.
యిర్మీయా 30 : 2 (ERVTE)
ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.
యిర్మీయా 30 : 3 (ERVTE)
ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”
యిర్మీయా 30 : 4 (ERVTE)
ಇಸ್ರೇಲಿನ ಮತ್ತು ಯೆಹೂದದ ಜನರ ಬಗ್ಗೆ ಯೆಹೋವನು ಈ ಸಂದೇಶವನ್ನು ಕೊಟ್ಟನು:
యిర్మీయా 30 : 5 (ERVTE)
“ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.
యిర్మీయా 30 : 6 (ERVTE)
“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.
యిర్మీయా 30 : 7 (ERVTE)
“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”
యిర్మీయా 30 : 8 (ERVTE)
ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
యిర్మీయా 30 : 9 (ERVTE)
ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”
యిర్మీయా 30 : 10 (ERVTE)
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
యిర్మీయా 30 : 11 (ERVTE)
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
యిర్మీయా 30 : 12 (ERVTE)
ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.
యిర్మీయా 30 : 13 (ERVTE)
ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.
యిర్మీయా 30 : 14 (ERVTE)
ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.
యిర్మీయా 30 : 15 (ERVTE)
ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.
యిర్మీయా 30 : 16 (ERVTE)
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
యిర్మీయా 30 : 17 (ERVTE)
ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”b
యిర్మీయా 30 : 18 (ERVTE)
ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
యిర్మీయా 30 : 19 (ERVTE)
ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.
యిర్మీయా 30 : 20 (ERVTE)
ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.
యిర్మీయా 30 : 21 (ERVTE)
ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.
యిర్మీయా 30 : 22 (ERVTE)
ನೀವು ನನ್ನ ಜನರಾಗುವಿರಿ ಮತ್ತು ನಾನು ನಿಮ್ಮ ದೇವರಾಗುವೆನು.”
యిర్మీయా 30 : 23 (ERVTE)
ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.
యిర్మీయా 30 : 24 (ERVTE)
ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24