యిర్మీయా 39 : 1 (ERVTE)
{#1ಜೆರುಸಲೇಮಿನ ಪತನ } ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.
యిర్మీయా 39 : 2 (ERVTE)
ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.
యిర్మీయా 39 : 3 (ERVTE)
ಆಗ ಬಾಬಿಲೋನಿನ ಎಲ್ಲಾ ರಾಜ್ಯಾಧಿಕಾರಿಗಳು ಜೆರುಸಲೇಮ್ ನಗರವನ್ನು ಪ್ರವೇಶಿಸಿದರು. ಅವರು ಒಳಗೆ ಬಂದು ಮಧ್ಯ ದ್ವಾರದಲ್ಲಿ ಕುಳಿತುಕೊಂಡರು. ಅವರು ಯಾರೆಂದರೆ: ಸಮ್ಗರ್ ನೆಬೋದದ ಅಧಿಪತಿಯಾದ ನೇರ್ಗಲ್ ಸರೆಚರ್; ಇನ್ನೊಬ್ಬ ದೊಡ್ಡ ಅಧಿಕಾರಿಯಾದ ಸೆರ್ಸೆಕೀಮ್ ಮತ್ತು ಬೇರೆಬೇರೆ ದೊಡ್ಡ ಅಧಿಕಾರಿಗಳು ಕೂಡ ಅಲ್ಲಿದ್ದರು.
యిర్మీయా 39 : 4 (ERVTE)
ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.
యిర్మీయా 39 : 5 (ERVTE)
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
యిర్మీయా 39 : 6 (ERVTE)
ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.
యిర్మీయా 39 : 7 (ERVTE)
ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.
యిర్మీయా 39 : 8 (ERVTE)
ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.
యిర్మీయా 39 : 9 (ERVTE)
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
యిర్మీయా 39 : 10 (ERVTE)
ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.
యిర్మీయా 39 : 11 (ERVTE)
ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:
యిర్మీయా 39 : 12 (ERVTE)
“ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನ್ನೆಲ್ಲ ಕೊಡಿ.”
యిర్మీయా 39 : 13 (ERVTE)
ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಧಿಕಾರಿಯಾದ ನೆಬೂಷಜ್ಜಾನ್, ದೊಡ್ಡ ಅಧಿಕಾರಿಯಾದ ನೇರ್ಗಲ್ ಸರೆಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು.
యిర్మీయా 39 : 14 (ERVTE)
ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
యిర్మీయా 39 : 15 (ERVTE)
{#1ಎಬೆದ್ಮೆಲೆಕನಿಗೆ ಯೆಹೋವನಿಂದ ಒಂದು ಸಂದೇಶ } ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿಯಾಗಿದ್ದಾಗ ಯೆಹೋವನಿಂದ ಅವನಿಗೊಂದು ಸಂದೇಶ ಬಂದಿತು. ಆ ಸಂದೇಶ ಹೀಗಿತ್ತು:
యిర్మీయా 39 : 16 (ERVTE)
“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.
యిర్మీయా 39 : 17 (ERVTE)
ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಧಿಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.
యిర్మీయా 39 : 18 (ERVTE)
ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬಂದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’ ” ಇದು ಯೆಹೋವನ ನುಡಿ.

1 2 3 4 5 6 7 8 9 10 11 12 13 14 15 16 17 18