యిర్మీయా 44 : 1 (ERVTE)
{#1ಈಜಿಪ್ಟಿನಲ್ಲಿದ್ದ ಯೆಹೂದ್ಯರಿಗೆ ಯೆಹೋವನ ಸಂದೇಶ } ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:
యిర్మీయా 44 : 2 (ERVTE)
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.
యిర్మీయా 44 : 3 (ERVTE)
ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.
యిర్మీయా 44 : 4 (ERVTE)
ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.
యిర్మీయా 44 : 5 (ERVTE)
ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.
యిర్మీయా 44 : 6 (ERVTE)
ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.
యిర్మీయా 44 : 7 (ERVTE)
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.
యిర్మీయా 44 : 8 (ERVTE)
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
యిర్మీయా 44 : 9 (ERVTE)
ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?
యిర్మీయా 44 : 10 (ERVTE)
ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”
యిర్మీయా 44 : 11 (ERVTE)
“ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.
యిర్మీయా 44 : 12 (ERVTE)
ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
యిర్మీయా 44 : 13 (ERVTE)
ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.
యిర్మీయా 44 : 14 (ERVTE)
ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”
యిర్మీయా 44 : 15 (ERVTE)
ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:
యిర్మీయా 44 : 16 (ERVTE)
“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.
యిర్మీయా 44 : 17 (ERVTE)
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
యిర్మీయా 44 : 18 (ERVTE)
ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”
యిర్మీయా 44 : 20 (ERVTE)
ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.” ಆಗ ಯೆರೆಮೀಯನು ತನಗೆ ಉತ್ತರ ಕೊಟ್ಟ ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿ ಹೀಗೆ ಹೇಳಿದನು:
యిర్మీయా 44 : 21 (ERVTE)
“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.
యిర్మీయా 44 : 22 (ERVTE)
ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.
యిర్మీయా 44 : 23 (ERVTE)
ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ[* ಒಡಂಬಡಿಕೆ ಬಹುಶಃ ಇದು ದೇವರ ಮತ್ತು ಇಸ್ರೇಲಿಯರ ನಡುವೆ ಆದ ಒಡಂಬಡಿಕೆ. ] ನಡೆಯಲಿಲ್ಲ.”
యిర్మీయా 44 : 24 (ERVTE)
ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:
యిర్మీయా 44 : 25 (ERVTE)
ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ[† ಸ್ತ್ರೀಯರೇ ನೀವು ಮತ್ತು ನಿಮ್ಮ ಹೆಂಡತಿಯರು. ] “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’
యిర్మీయా 44 : 26 (ERVTE)
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.
యిర్మీయా 44 : 27 (ERVTE)
ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.
యిర్మీయా 44 : 28 (ERVTE)
ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.
యిర్మీయా 44 : 29 (ERVTE)
ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.
యిర్మీయా 44 : 30 (ERVTE)
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’ ”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30