యోహాను సువార్త 16 : 1 (ERVTE)
“ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.
యోహాను సువార్త 16 : 2 (ERVTE)
ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.
యోహాను సువార్త 16 : 3 (ERVTE)
ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.
యోహాను సువార్త 16 : 4 (ERVTE)
ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. {#1ಪವಿತ್ರಾತ್ಮನ ಕಾರ್ಯ } “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
యోహాను సువార్త 16 : 5 (ERVTE)
ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.
యోహాను సువార్త 16 : 6 (ERVTE)
ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ.
యోహాను సువార్త 16 : 7 (ERVTE)
ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.
యోహాను సువార్త 16 : 8 (ERVTE)
“ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.
యోహాను సువార్త 16 : 9 (ERVTE)
ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು.
యోహాను సువార్త 16 : 10 (ERVTE)
ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ.
యోహాను సువార్త 16 : 11 (ERVTE)
ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.
యోహాను సువార్త 16 : 12 (ERVTE)
“ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು.
యోహాను సువార్త 16 : 13 (ERVTE)
ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.
యోహాను సువార్త 16 : 14 (ERVTE)
ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು.
యోహాను సువార్త 16 : 15 (ERVTE)
ನನ್ನ ತಂದೆಗೆ ಇರುವುದೆಲ್ಲಾ ನನ್ನದೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು.
యోహాను సువార్త 16 : 16 (ERVTE)
{#1ದುಃಖವು ಸಂತೋಷವಾಗುವುದು }
యోహాను సువార్త 16 : 17 (ERVTE)
“ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.” ಶಿಷ್ಯರಲ್ಲಿ ಕೆಲವರು, “ ‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
యోహాను సువార్త 16 : 18 (ERVTE)
ಶಿಷ್ಯರು, “ ‘ಸ್ವಲ್ಪಕಾಲ’ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
యోహాను సువార్త 16 : 19 (ERVTE)
ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ ‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?
యోహాను సువార్త 16 : 20 (ERVTE)
ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.
యోహాను సువార్త 16 : 21 (ERVTE)
“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.
యోహాను సువార్త 16 : 22 (ERVTE)
ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.
యోహాను సువార్త 16 : 23 (ERVTE)
ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
యోహాను సువార్త 16 : 24 (ERVTE)
ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.
యోహాను సువార్త 16 : 25 (ERVTE)
{#1ಲೋಕದ ಮೇಲೆ ವಿಜಯ } “ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು.
యోహాను సువార్త 16 : 26 (ERVTE)
ಆಗ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಬೇಡಿಕೊಳ್ಳುವಿರಿ. ನಾನು ನಿಮಗೋಸ್ಕರ ತಂದೆಯನ್ನು ಕೇಳಿಕೊಳ್ಳುವ ಅಗತ್ಯವಿರುವುದಿಲ್ಲ.
యోహాను సువార్త 16 : 27 (ERVTE)
ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.
యోహాను సువార్త 16 : 28 (ERVTE)
ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.
యోహాను సువార్త 16 : 29 (ERVTE)
ಆಗ ಶಿಷ್ಯರು ಯೇಸುವಿಗೆ, “ಈಗ ನೀನು ನಮ್ಮೊಂದಿಗೆ ಸ್ಪಷ್ಟವಾಗಿ ಮಾತಾಡುತ್ತಿರುವೆ. ಅರ್ಥವಾಗದಂಥ ಕಠಿಣ ಮಾತುಗಳನ್ನು ನೀನು ಬಳಸುತ್ತಿಲ್ಲ.
యోహాను సువార్త 16 : 30 (ERVTE)
ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
యోహాను సువార్త 16 : 31 (ERVTE)
ಯೇಸು, “ಹಾಗಾದರೆ ಈಗ ನೀವು ನಂಬುತ್ತೀರಾ?
యోహాను సువార్త 16 : 32 (ERVTE)
ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.
యోహాను సువార్త 16 : 33 (ERVTE)
“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.
❮
❯