యోహాను సువార్త 2 : 1 (ERVTE)
{#1ಕಾನಾ ಊರಿನಲ್ಲಿ ಮದುವೆ } ಮಾರನೆಯ ದಿನ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಇತ್ತು. ಯೇಸುವಿನ ತಾಯಿಯೂ ಬಂದಿದ್ದಳು.
యోహాను సువార్త 2 : 2 (ERVTE)
ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.
యోహాను సువార్త 2 : 3 (ERVTE)
ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.
యోహాను సువార్త 2 : 4 (ERVTE)
యోహాను సువార్త 2 : 5 (ERVTE)
ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
యోహాను సువార్త 2 : 6 (ERVTE)
ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.
యోహాను సువార్త 2 : 7 (ERVTE)
ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.
యోహాను సువార్త 2 : 8 (ERVTE)
ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು. ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.
యోహాను సువార్త 2 : 9 (ERVTE)
ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,
యోహాను సువార్త 2 : 10 (ERVTE)
“ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.
యోహాను సువార్త 2 : 11 (ERVTE)
యోహాను సువార్త 2 : 12 (ERVTE)
ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.
యోహాను సువార్త 2 : 13 (ERVTE)
ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು. {#1ದೇವಾಲಯದಲ್ಲಿ ಯೇಸು
(ಮತ್ತಾಯ 21:12-13; ಮಾರ್ಕ 11:15-17; ಲೂಕ 19:45-46) } ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.
యోహాను సువార్త 2 : 14 (ERVTE)
ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು.
యోహాను సువార్త 2 : 15 (ERVTE)
ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.
యోహాను సువార్త 2 : 16 (ERVTE)
ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.
యోహాను సువార్త 2 : 17 (ERVTE)
“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” --ಕೀರ್ತನೆ 69:9-- ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.
యోహాను సువార్త 2 : 18 (ERVTE)
యోహాను సువార్త 2 : 19 (ERVTE)
ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.
యోహాను సువార్త 2 : 20 (ERVTE)
ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.
యోహాను సువార్త 2 : 21 (ERVTE)
ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು. (ಆದರೆ ಯೇಸು ತನ್ನ ದೇಹವೇ ದೇವಾಲಯವೆಂಬ ಅರ್ಥದಲ್ಲಿ ಹೇಳಿದ್ದನು.
యోహాను సువార్త 2 : 22 (ERVTE)
ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)
యోహాను సువార్త 2 : 23 (ERVTE)
ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.
యోహాను సువార్త 2 : 24 (ERVTE)
ಆದರೆ ಯೇಸು ಅವರಲ್ಲಿ ಭರವಸೆ ಇಡಲಿಲ್ಲ. ಏಕೆಂದರೆ ಆತನು ಅವರನ್ನು ಚೆನ್ನಾಗಿ ಬಲ್ಲವನಾಗಿದ್ದನು.
యోహాను సువార్త 2 : 25 (ERVTE)
ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.
❮
❯