యోహాను సువార్త 7 : 1 (ERVTE)
{#1ಯೇಸು ಮತ್ತು ಆತನ ಸಹೋದರರು } ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.
యోహాను సువార్త 7 : 2 (ERVTE)
ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.
యోహాను సువార్త 7 : 3 (ERVTE)
ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.
యోహాను సువార్త 7 : 4 (ERVTE)
ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
యోహాను సువార్త 7 : 5 (ERVTE)
(ಯೇಸುವಿನ ಸಹೋದರರು ಸಹ ಆತನನ್ನು ನಂಬಲಿಲ್ಲ.)
యోహాను సువార్త 7 : 6 (ERVTE)
ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ.
యోహాను సువార్త 7 : 7 (ERVTE)
ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
యోహాను సువార్త 7 : 8 (ERVTE)
ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.
యోహాను సువార్త 7 : 9 (ERVTE)
ಯೇಸು ಹೀಗೆ ಹೇಳಿ ಗಲಿಲಾಯದಲ್ಲೇ ಉಳಿದುಕೊಂಡನು.
యోహాను సువార్త 7 : 10 (ERVTE)
ಆದ್ದರಿಂದ ಯೇಸುವಿನ ಸಹೋದರರು ಹಬ್ಬಕ್ಕಾಗಿ ಹೊರಟರು. ಅವರು ಹೋದನಂತರ ಆತನು ಸಹ ಗುಟ್ಟಾಗಿಹೋದನು.
యోహాను సువార్త 7 : 11 (ERVTE)
ಹಬ್ಬದಲ್ಲಿ ಯೆಹೂದ್ಯರು, “ಆತನು ಎಲ್ಲಿದ್ದಾನೆ” ಎಂದು ಕೇಳುತ್ತಾ ಆತನಿಗಾಗಿ ಹುಡುಕುತ್ತಿದ್ದರು.
యోహాను సువార్త 7 : 12 (ERVTE)
ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.
యోహాను సువార్త 7 : 13 (ERVTE)
ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.
యోహాను సువార్త 7 : 14 (ERVTE)
{#1ಯೆಹೂದ್ಯರ ಹಬ್ಬದಲ್ಲಿ ಯೇಸುವಿನ ಉಪದೇಶ } ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.
యోహాను సువార్త 7 : 15 (ERVTE)
ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.
యోహాను సువార్త 7 : 16 (ERVTE)
ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.
యోహాను సువార్త 7 : 17 (ERVTE)
ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
యోహాను సువార్త 7 : 18 (ERVTE)
ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
యోహాను సువార్త 7 : 19 (ERVTE)
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.
యోహాను సువార్త 7 : 20 (ERVTE)
యోహాను సువార్త 7 : 21 (ERVTE)
ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.
యోహాను సువార్త 7 : 22 (ERVTE)
ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.
యోహాను సువార్త 7 : 23 (ERVTE)
ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?
యోహాను సువార్త 7 : 24 (ERVTE)
ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.
యోహాను సువార్త 7 : 25 (ERVTE)
{#1ಯೇಸುವೇ ಕ್ರಿಸ್ತನೋ? } ಬಳಿಕ, ಜೆರುಸಲೇಮಿನಲ್ಲಿ ವಾಸವಾಗಿದ್ದ ಕೆಲವರು, “ಅವರು ಕೊಲ್ಲಲು ಪ್ರಯತ್ನಿಸುತ್ತಿರುವುದು ಈ ವ್ಯಕ್ತಿಯನ್ನೇ
యోహాను సువార్త 7 : 26 (ERVTE)
ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.
యోహాను సువార్త 7 : 27 (ERVTE)
ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.
యోహాను సువార్త 7 : 28 (ERVTE)
ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.
యోహాను సువార్త 7 : 29 (ERVTE)
ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
యోహాను సువార్త 7 : 30 (ERVTE)
ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.
యోహాను సువార్త 7 : 31 (ERVTE)
ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.
యోహాను సువార్త 7 : 32 (ERVTE)
{#1ಯೇಸುವನ್ನು ಬಂಧಿಸಲು ಯೆಹೂದ್ಯರ ಪ್ರಯತ್ನ } ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.
యోహాను సువార్త 7 : 33 (ERVTE)
ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.
యోహాను సువార్త 7 : 34 (ERVTE)
ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.
యోహాను సువార్త 7 : 35 (ERVTE)
ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?
యోహాను సువార్త 7 : 36 (ERVTE)
ಇವನು (ಯೇಸು), ‘ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ’ ಎನ್ನುತ್ತಾನೆ. ಅಲ್ಲದೆ ಇವನು, ‘ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
యోహాను సువార్త 7 : 37 (ERVTE)
{#1ಪವಿತ್ರಾತ್ಮನ ಬಗ್ಗೆ ಉಪದೇಶ } ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
యోహాను సువార్త 7 : 38 (ERVTE)
ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
యోహాను సువార్త 7 : 39 (ERVTE)
ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
యోహాను సువార్త 7 : 40 (ERVTE)
{#1ಯೇಸುವಿನ ಬಗ್ಗೆ ಜನರ ವಾದವಿವಾದ }
యోహాను సువార్త 7 : 41 (ERVTE)
ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು. “ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ.
యోహాను సువార్త 7 : 42 (ERVTE)
ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.
యోహాను సువార్త 7 : 43 (ERVTE)
ಹೀಗೆ ಯೇಸುವಿನ ಕುರಿತು ಜನರಲ್ಲಿ ಭೇದ ಉಂಟಾಯಿತು.
యోహాను సువార్త 7 : 44 (ERVTE)
ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಬಂಧಿಸಲು ಯಾರೂ ಪ್ರಯತ್ನಿಸಲಿಲ್ಲ.
యోహాను సువార్త 7 : 45 (ERVTE)
{#1ಯೆಹೂದ್ಯನಾಯಕರ ಅಪನಂಬಿಕೆ }
యోహాను సువార్త 7 : 46 (ERVTE)
ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
యోహాను సువార్త 7 : 47 (ERVTE)
ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು. ಫರಿಸಾಯರು, “ಹಾಗಾದರೆ, ಯೇಸು ನಿಮ್ಮನ್ನು ಸಹ ಮರುಳುಗೊಳಿಸುತ್ತಿದ್ದಾನೆ!
యోహాను సువార్త 7 : 48 (ERVTE)
ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!
యోహాను సువార్త 7 : 49 (ERVTE)
ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.
యోహాను సువార్త 7 : 50 (ERVTE)
ಆದರೆ ಆ ಗುಂಪಿನಲ್ಲಿ ನಿಕೊದೇಮನು ಇದ್ದನು. ಮೊದಲೊಮ್ಮೆ ಯೇಸುವನ್ನು ನೋಡಲು ಹೋಗಿದ್ದವನು ಇವನೇ.
యోహాను సువార్త 7 : 51 (ERVTE)
ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.
యోహాను సువార్త 7 : 52 (ERVTE)
ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.
యోహాను సువార్త 7 : 53 (ERVTE)
ಬಳಿಕ ಅವರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53