యోహాను సువార్త 8 : 1 (ERVTE)
{#1ಸಿಕ್ಕಿಕೊಂಡ ವ್ಯಭಿಚಾರಿಣಿ } ಯೇಸು ಆಲಿವ್ ಮರಗಳ ಗುಡ್ಡಕ್ಕೆ ಹೋದನು.
యోహాను సువార్త 8 : 2 (ERVTE)
ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.
యోహాను సువార్త 8 : 3 (ERVTE)
ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,
యోహాను సువార్త 8 : 4 (ERVTE)
ಯೇಸುವಿಗೆ, “ಉಪದೇಶಕನೇ, ಈ ಸ್ತ್ರೀಯು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಕೊಂಡಳು.
యోహాను సువార్త 8 : 5 (ERVTE)
ಇಂಥ ಕಾರ್ಯವನ್ನು ಮಾಡುವ ಪ್ರತಿಯೊಬ್ಬ ಸ್ತ್ರೀಯನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯ ಧರ್ಮಶಾಸ್ತ್ರವು ಆಜ್ಞಾಪಿಸುತ್ತದೆ. ಈಗ ನಾವೇನು ಮಾಡಬೇಕು? ನೀನೇ ಹೇಳು” ಎಂದರು.
యోహాను సువార్త 8 : 6 (ERVTE)
ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.
యోహాను సువార్త 8 : 7 (ERVTE)
ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,
యోహాను సువార్త 8 : 8 (ERVTE)
ಮತ್ತೆ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದನು.
యోహాను సువార్త 8 : 9 (ERVTE)
ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.
యోహాను సువార్త 8 : 10 (ERVTE)
ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.
యోహాను సువార్త 8 : 11 (ERVTE)
యోహాను సువార్త 8 : 12 (ERVTE)
ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು. {#1ಯೇಸುವೇ ಲೋಕಕ್ಕೆ ಬೆಳಕು }
యోహాను సువార్త 8 : 13 (ERVTE)
ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.
యోహాను సువార్త 8 : 14 (ERVTE)
ಫರಿಸಾಯರು ಯೇಸುವಿಗೆ, “ನೀನು ನಿನ್ನ ಬಗ್ಗೆ ಮಾತಾಡುವ ಈ ಸಂಗತಿಗಳು ಸತ್ಯವೆಂದು ಹೇಳುವವನು ನೀನೊಬ್ಬನು ಮಾತ್ರ. ಆದ್ದರಿಂದ, ನೀನು ಹೇಳುವ ಈ ಸಂಗತಿಗಳನ್ನು ನಾವು ಸ್ವೀಕರಿಸಿಕೊಳ್ಳಲಾರೆವು” ಎಂದು ಹೇಳಿದರು. ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.
యోహాను సువార్త 8 : 15 (ERVTE)
ನೀವು ಹೊರತೋರಿಕೆಯ ಪ್ರಕಾರ ತೀರ್ಪು ಮಾಡುತ್ತಿದ್ದೀರಿ. ಆದರೆ ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
యోహాను సువార్త 8 : 16 (ERVTE)
ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ. ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ.
యోహాను సువార్త 8 : 17 (ERVTE)
ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.
యోహాను సువార్త 8 : 18 (ERVTE)
ನನ್ನ ಪರವಾದ ಸಾಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ, ನನ್ನನ್ನು ಕಳುಹಿಸಿದ ತಂದೆಯು ನನ್ನ ಮತ್ತೊಬ್ಬ ಸಾಕ್ಷಿಯಾಗಿದ್ದಾನೆ” ಎಂದು ಉತ್ತರಕೊಟ್ಟನು.
యోహాను సువార్త 8 : 19 (ERVTE)
ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದಿರುವಿರಿ” ಎಂದು ಹೇಳಿದನು.
యోహాను సువార్త 8 : 20 (ERVTE)
ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.
యోహాను సువార్త 8 : 21 (ERVTE)
యోహాను సువార్త 8 : 22 (ERVTE)
ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.
యోహాను సువార్త 8 : 23 (ERVTE)
ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ.
యోహాను సువార్త 8 : 24 (ERVTE)
ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.
యోహాను సువార్త 8 : 25 (ERVTE)
ಯೆಹೂದ್ಯರು, “ಹಾಗಾದರೆ, ನೀನು ಯಾರು?” ಎಂದು ಕೇಳಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿಂದ ತಿಳಿಸುತ್ತಾ ಬಂದೆನೋ, ಆತನೇ ನಾನು.
యోహాను సువార్త 8 : 26 (ERVTE)
ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.
యోహాను సువార్త 8 : 27 (ERVTE)
ಯೇಸು ಯಾರ ಬಗ್ಗೆ ಮಾತಾಡುತ್ತಿದ್ದಾನೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಲಿಲ್ಲ. ಯೇಸು ಅವರಿಗೆ ತಂದೆಯ (ದೇವರ) ಬಗ್ಗೆ ಹೇಳುತ್ತಿದ್ದನು.
యోహాను సువార్త 8 : 28 (ERVTE)
ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.
యోహాను సువార్త 8 : 29 (ERVTE)
ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.
యోహాను సువార్త 8 : 30 (ERVTE)
ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಅನೇಕ ಜನರು ಆತನಲ್ಲಿ ನಂಬಿಕೆಯಿಟ್ಟರು.
యోహాను సువార్త 8 : 31 (ERVTE)
{#1ಪಾಪವಿಮೋಚನೆಯ ಬಗ್ಗೆ ಯೇಸುವಿನ ಉಪದೇಶ } ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.
యోహాను సువార్త 8 : 32 (ERVTE)
ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.
యోహాను సువార్త 8 : 33 (ERVTE)
యోహాను సువార్త 8 : 34 (ERVTE)
ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು. ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ.
యోహాను సువార్త 8 : 35 (ERVTE)
ಗುಲಾಮನು ಒಂದು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಮಗನು ಕುಟುಂಬಕ್ಕೆ ಶಾಶ್ವತವಾಗಿ ಸೇರಿದವನಾಗಿದ್ದಾನೆ.
యోహాను సువార్త 8 : 36 (ERVTE)
ಆದ್ದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನೀವು ನಿಜವಾಗಿಯೂ ಬಿಡುಗಡೆಯಾಗಿರುವಿರಿ.
యోహాను సువార్త 8 : 37 (ERVTE)
ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.
యోహాను సువార్త 8 : 38 (ERVTE)
ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೋ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಹೇಳಿದನು.
యోహాను సువార్త 8 : 39 (ERVTE)
ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.
యోహాను సువార్త 8 : 40 (ERVTE)
ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.
యోహాను సువార్త 8 : 41 (ERVTE)
ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು.
యోహాను సువార్త 8 : 42 (ERVTE)
ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು. ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.
యోహాను సువార్త 8 : 43 (ERVTE)
ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.
యోహాను సువార్త 8 : 44 (ERVTE)
ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.
యోహాను సువార్త 8 : 45 (ERVTE)
“ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.
యోహాను సువార్త 8 : 46 (ERVTE)
ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?
యోహాను సువార్త 8 : 47 (ERVTE)
ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.
యోహాను సువార్త 8 : 48 (ERVTE)
{#1ತನ್ನ ಮತ್ತು ಅಬ್ರಹಾಮನ ಬಗ್ಗೆ ಯೇಸುವಿನ ಹೇಳಿಕೆ }
యోహాను సువార్త 8 : 49 (ERVTE)
ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು. ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.
యోహాను సువార్త 8 : 50 (ERVTE)
ನನಗಾಗಿ ಗೌರವವನ್ನು ಪಡೆದುಕೊಳ್ಳಲು ನಾನು ಪ್ರಯತ್ನಿಸುತ್ತಿಲ್ಲ. ನನಗೆ ಗೌರವ ದೊರೆಯಬೇಕೆಂದು ಬಯಸುವ ಒಬ್ಬಾತನಿದ್ದಾನೆ. ಆತನೇ ನ್ಯಾಯಾಧಿಪತಿ.
యోహాను సువార్త 8 : 51 (ERVTE)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.
యోహాను సువార్త 8 : 52 (ERVTE)
ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.
యోహాను సువార్త 8 : 53 (ERVTE)
ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.
యోహాను సువార్త 8 : 54 (ERVTE)
ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.
యోహాను సువార్త 8 : 55 (ERVTE)
ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.
యోహాను సువార్త 8 : 56 (ERVTE)
ನಾನು ಬರುವ ದಿನವನ್ನು ತಾನು ನೋಡುವುದಾಗಿ ನಿಮ್ಮ ತಂದೆಯಾದ ಅಬ್ರಹಾಮನು ಬಹು ಸಂತೋಷಪಟ್ಟನು. ಅವನು ಆ ದಿನವನ್ನು ಕಂಡು ಬಹು ಸಂತೋಷಗೊಂಡನು” ಎಂದು ಉತ್ತರಕೊಟ್ಟನು.
యోహాను సువార్త 8 : 57 (ERVTE)
యోహాను సువార్త 8 : 58 (ERVTE)
ಯೆಹೂದ್ಯರು ಯೇಸುವಿಗೆ, “ಏನು? ನೀನು ಅಬ್ರಹಾಮನನ್ನು ನೋಡಿರುವಿಯೋ? ನಿನಗೆ ಐವತ್ತು ವರ್ಷವೂ ಆಗಿಲ್ಲ!” ಎಂದು ಹೇಳಿದರು. ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.
యోహాను సువార్త 8 : 59 (ERVTE)
ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.
❮
❯