యోహాను సువార్త 9 : 1 (ERVTE)
{#1ಯೇಸು ಹುಟ್ಟು ಕುರುಡನನ್ನು ಗುಣಪಡಿಸುವನು } ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.
యోహాను సువార్త 9 : 2 (ERVTE)
ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.
యోహాను సువార్త 9 : 3 (ERVTE)
ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.
యోహాను సువార్త 9 : 4 (ERVTE)
ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.
యోహాను సువార్త 9 : 5 (ERVTE)
ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು.
యోహాను సువార్త 9 : 6 (ERVTE)
ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.
యోహాను సువార్త 9 : 7 (ERVTE)
ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.
యోహాను సువార్త 9 : 8 (ERVTE)
యోహాను సువార్త 9 : 9 (ERVTE)
ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು, “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.
యోహాను సువార్త 9 : 10 (ERVTE)
ಕೆಲವು ಜನರು, “ಹೌದು ಅವನೇ” ಎಂದು ಹೇಳಿದರು. ಇನ್ನು ಕೆಲವರು, “ಇಲ್ಲ, ಇವನು ಆ ಮನುಷ್ಯನಲ್ಲ. ಇವನು ಅವನಂತಿದ್ದಾನಷ್ಟೇ” ಎಂದು ಹೇಳಿದರು. ಅದಕ್ಕೆ ಆ ಮನುಷ್ಯನು, “ನಾನೇ ಅವನು” ಎಂದು ಹೇಳಿದನು.
యోహాను సువార్త 9 : 11 (ERVTE)
ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.
యోహాను సువార్త 9 : 12 (ERVTE)
ಆ ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಸಿಲೋವ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
యోహాను సువార్త 9 : 13 (ERVTE)
ಜನರು ಆ ಮನುಷ್ಯನಿಗೆ, “ಆ ವ್ಯಕ್ತಿ ಎಲ್ಲಿದ್ದಾನೆ?” ಎಂದು ಕೇಳಿದರು. ಆ ಮನುಷ್ಯನು, “ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು. {#1ಗುಣಹೊಂದಿದ ವ್ಯಕ್ತಿಗೆ ಫರಿಸಾಯರಿಂದ ವಿಚಾರಣೆ } ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ.
యోహాను సువార్త 9 : 14 (ERVTE)
ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್ದಿನದಲ್ಲಿ.
యోహాను సువార్త 9 : 15 (ERVTE)
ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.
యోహాను సువార్త 9 : 16 (ERVTE)
ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
యోహాను సువార్త 9 : 17 (ERVTE)
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.
యోహాను సువార్త 9 : 18 (ERVTE)
ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು. ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆತಾಯಿಗಳನ್ನು ಕರೆಯಿಸಿದರು.
యోహాను సువార్త 9 : 19 (ERVTE)
ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು.
యోహాను సువార్త 9 : 20 (ERVTE)
ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು.
యోహాను సువార్త 9 : 21 (ERVTE)
ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು.
యోహాను సువార్త 9 : 22 (ERVTE)
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.
యోహాను సువార్త 9 : 23 (ERVTE)
ಆದಕಾರಣವೇ ಅವನ ತಂದೆತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು.
యోహాను సువార్త 9 : 24 (ERVTE)
యోహాను సువార్త 9 : 25 (ERVTE)
ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.
యోహాను సువార్త 9 : 26 (ERVTE)
ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
యోహాను సువార్త 9 : 27 (ERVTE)
ಯೆಹೂದ್ಯನಾಯಕರು, “ಅವನು (ಯೇಸು) ನಿನಗೇನು ಮಾಡಿದನು? ಅವನು ನಿನ್ನ ಕಣ್ಣುಗಳನ್ನು ಹೇಗೆ ಗುಣಪಡಿಸಿದನು?” ಎಂದು ಕೇಳಿದರು.
యోహాను సువార్త 9 : 28 (ERVTE)
ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು. ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ.
యోహాను సువార్త 9 : 29 (ERVTE)
ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.
యోహాను సువార్త 9 : 30 (ERVTE)
ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.
యోహాను సువార్త 9 : 31 (ERVTE)
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.
యోహాను సువార్త 9 : 32 (ERVTE)
ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ.
యోహాను సువార్త 9 : 33 (ERVTE)
ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು.
యోహాను సువార్త 9 : 34 (ERVTE)
యోహాను సువార్త 9 : 35 (ERVTE)
ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು. {#1ಆತ್ಮಿಕ ಅಂಧತೆ }
యోహాను సువార్త 9 : 36 (ERVTE)
ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.
యోహాను సువార్త 9 : 37 (ERVTE)
ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು.
యోహాను సువార్త 9 : 38 (ERVTE)
ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು.
యోహాను సువార్త 9 : 39 (ERVTE)
ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು.
యోహాను సువార్త 9 : 40 (ERVTE)
ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.
యోహాను సువార్త 9 : 41 (ERVTE)
ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು. ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.
❮
❯