యెహొషువ 11 : 1 (ERVTE)
{#1ಉತ್ತರದ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡದ್ದು } ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.
యెహొషువ 11 : 2 (ERVTE)
ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.
యెహొషువ 11 : 3 (ERVTE)
ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.
యెహొషువ 11 : 4 (ERVTE)
ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.
యెహొషువ 11 : 6 (ERVTE)
ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.
యెహొషువ 11 : 7 (ERVTE)
ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು. ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.
యెహొషువ 11 : 8 (ERVTE)
ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.
యెహొషువ 11 : 9 (ERVTE)
ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.
యెహొషువ 11 : 10 (ERVTE)
ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)
యెహొషువ 11 : 11 (ERVTE)
ಇಸ್ರೇಲಿನ ಸೈನಿಕರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಆ ಪಟ್ಟಣವನ್ನು ಸುಟ್ಟುಬಿಟ್ಟರು.
యెహొషువ 11 : 12 (ERVTE)
ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.
యెహొషువ 11 : 13 (ERVTE)
ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಈ ಪಟ್ಟಣವನ್ನು ಯೆಹೋಶುವನು ಸುಟ್ಟನು.
యెహొషువ 11 : 14 (ERVTE)
ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.
యెహొషువ 11 : 15 (ERVTE)
ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.
యెహొషువ 11 : 16 (ERVTE)
ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.
యెహొషువ 11 : 17 (ERVTE)
ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.
యెహొషువ 11 : 18 (ERVTE)
ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.
యెహొషువ 11 : 19 (ERVTE)
ಆ ಪ್ರದೇಶದಲ್ಲಿ ಕೇವಲ ಒಂದು ಪಟ್ಟಣ ಮಾತ್ರ ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿತ್ತು. ಅದೇ ಹಿವ್ವಿಯರ ಗಿಬ್ಯೋನ್ ಪಟ್ಟಣ. ಉಳಿದೆಲ್ಲ ಪಟ್ಟಣಗಳು ಯುದ್ಧದಲ್ಲಿ ಸೋತುಹೋಗಿದ್ದವು.
యెహొషువ 11 : 20 (ERVTE)
ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.
యెహొషువ 11 : 21 (ERVTE)
ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.
యెహొషువ 11 : 22 (ERVTE)
ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.
యెహొషువ 11 : 23 (ERVTE)
ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23