యెహొషువ 21 : 1 (ERVTE)
{#1ಯಾಜಕರಿಗೆ ಮತ್ತು ಲೇವಿಕುಲದವರಿಗೆ ಪಟ್ಟಣಗಳು } ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.
యెహొషువ 21 : 2 (ERVTE)
ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.
యెహొషువ 21 : 3 (ERVTE)
ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು:
యెహొషువ 21 : 4 (ERVTE)
యెహొషువ 21 : 5 (ERVTE)
ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂ ಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿ ಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.
యెహొషువ 21 : 6 (ERVTE)
ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು.
యెహొషువ 21 : 7 (ERVTE)
ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
యెహొషువ 21 : 8 (ERVTE)
ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.
యెహొషువ 21 : 9 (ERVTE)
ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು. ಯೆಹೂದ ಮತ್ತು ಸಿಮೆಯೋನ್ ಕುಲದವರ ಪ್ರದೇಶಗಳಲ್ಲಿ ಬರುವ ಪಟ್ಟಣಗಳ ಹೆಸರುಗಳು ಇಂತಿವೆ:
యెహొషువ 21 : 10 (ERVTE)
ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು.
యెహొషువ 21 : 11 (ERVTE)
ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.
యెహొషువ 21 : 12 (ERVTE)
ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.
యెహొషువ 21 : 13 (ERVTE)
ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,
యెహొషువ 21 : 14 (ERVTE)
ಯತ್ತೀರ್, ಎಷ್ಟೆಮೋಹ,
యెహొషువ 21 : 15 (ERVTE)
ಹೋಲೋನ್, ದೆಬೀರ್,
యెహొషువ 21 : 16 (ERVTE)
ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
యెహొషువ 21 : 17 (ERVTE)
ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ,
యెహొషువ 21 : 18 (ERVTE)
ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು.
యెహొషువ 21 : 19 (ERVTE)
ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
యెహొషువ 21 : 20 (ERVTE)
ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು:
యెహొషువ 21 : 21 (ERVTE)
ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,
యెహొషువ 21 : 22 (ERVTE)
ಕಿಬ್‌ಚೈಮ್ ಮತ್ತು ಬೇತ್‌ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.
యెహొషువ 21 : 23 (ERVTE)
ದಾನ್ ಕುಲದವರು ಅವರಿಗೆ ಎಲ್ತೆಕೇ, ಗಿಬ್ಬೆತೋನ್,
యెహొషువ 21 : 24 (ERVTE)
ಅಯ್ಯಾಲೋನ್ ಮತ್ತು ಗತ್‌ರಿಮ್ಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 25 (ERVTE)
యెహొషువ 21 : 26 (ERVTE)
ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 27 (ERVTE)
ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು.
యెహొషువ 21 : 28 (ERVTE)
ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. ಇಸ್ಸಾಕಾರ್ ಕುಲದವರು ಕಿಷ್ಯೋನ್, ದ್ವಾೆರತ್,
యెహొషువ 21 : 29 (ERVTE)
ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 30 (ERVTE)
ಆಶೇರ್ ಕುಲದವರು ಮಿಷಾಲ್, ಅಬ್ದೋನ್,
యెహొషువ 21 : 31 (ERVTE)
ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 32 (ERVTE)
యెహొషువ 21 : 33 (ERVTE)
ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್‌ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 34 (ERVTE)
ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು. ಲೇವಿಯರ ಮತ್ತೊಂದು ಗೋತ್ರವು ಮೆರಾರೀ ಎಂಬುದು. ಆ ಗೋತ್ರಕ್ಕೆ ದೊರೆತ ಪಟ್ಟಣಗಳು ಇಂತಿವೆ: ಜೆಬುಲೂನ್ ಕುಲದವರು ಅವರಿಗೆ ಚೂಕ್ನೀಮ್, ಕರ್ತಾ,
యెహొషువ 21 : 35 (ERVTE)
ದಿಮ್ನಾ, ನಹಲಾಲ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 36 (ERVTE)
ರೂಬೇನ್ಯರು ಅವರಿಗೆ ಬೆಚೆರ್, ಯಹಚಾ,
యెహొషువ 21 : 37 (ERVTE)
ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 38 (ERVTE)
ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,
యెహొషువ 21 : 39 (ERVTE)
ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
యెహొషువ 21 : 40 (ERVTE)
యెహొషువ 21 : 41 (ERVTE)
ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದುಕೊಂಡರು. ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.
యెహొషువ 21 : 42 (ERVTE)
ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು.
యెహొషువ 21 : 43 (ERVTE)
ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.
యెహొషువ 21 : 44 (ERVTE)
ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.
యెహొషువ 21 : 45 (ERVTE)
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45