విలాపవాక్యములు 3 : 1 (ERVTE)
{#1ಸಂಕಟದ ಅರ್ಥ } ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ!
విలాపవాక్యములు 3 : 2 (ERVTE)
ಯೆಹೋವನು ನನ್ನನ್ನು ಬೆಳಕೇ ಇಲ್ಲದ ಕತ್ತಲೆಗೆ ನಡೆಸಿಕೊಂಡು ಬಂದನು.
విలాపవాక్యములు 3 : 3 (ERVTE)
ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು.
విలాపవాక్యములు 3 : 4 (ERVTE)
ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು.
విలాపవాక్యములు 3 : 5 (ERVTE)
ಆತನು ನನ್ನನ್ನು ಕಠೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆಹಾಕಿದ್ದಾನೆ.
విలాపవాక్యములు 3 : 6 (ERVTE)
ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ.
విలాపవాక్యములు 3 : 7 (ERVTE)
ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.
విలాపవాక్యములు 3 : 8 (ERVTE)
ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.
విలాపవాక్యములు 3 : 9 (ERVTE)
ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ.
విలాపవాక్యములు 3 : 10 (ERVTE)
ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.
విలాపవాక్యములు 3 : 11 (ERVTE)
ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದುಬಿಟ್ಟಿದ್ದಾನೆ.
విలాపవాక్యములు 3 : 12 (ERVTE)
ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು.
విలాపవాక్యములు 3 : 13 (ERVTE)
ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು.
విలాపవాక్యములు 3 : 14 (ERVTE)
ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ.
విలాపవాక్యములు 3 : 15 (ERVTE)
ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.
విలాపవాక్యములు 3 : 16 (ERVTE)
ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದುಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ.
విలాపవాక్యములు 3 : 17 (ERVTE)
ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು.
విలాపవాక్యములు 3 : 18 (ERVTE)
ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.
విలాపవాక్యములు 3 : 19 (ERVTE)
ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.
విలాపవాక్యములు 3 : 20 (ERVTE)
ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ.
విలాపవాక్యములు 3 : 21 (ERVTE)
ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ:
విలాపవాక్యములు 3 : 22 (ERVTE)
ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.
విలాపవాక్యములు 3 : 23 (ERVTE)
ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!
విలాపవాక్యములు 3 : 24 (ERVTE)
ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು.
విలాపవాక్యములు 3 : 25 (ERVTE)
ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
విలాపవాక్యములు 3 : 26 (ERVTE)
ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.
విలాపవాక్యములు 3 : 27 (ERVTE)
ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು.
విలాపవాక్యములు 3 : 28 (ERVTE)
ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು.
విలాపవాక్యములు 3 : 29 (ERVTE)
ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.
విలాపవాక్యములు 3 : 30 (ERVTE)
ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.
విలాపవాక్యములు 3 : 31 (ERVTE)
ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.
విలాపవాక్యములు 3 : 32 (ERVTE)
ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.
విలాపవాక్యములు 3 : 33 (ERVTE)
ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.
విలాపవాక్యములు 3 : 34 (ERVTE)
ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.
విలాపవాక్యములు 3 : 35 (ERVTE)
ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ.
విలాపవాక్యములు 3 : 36 (ERVTE)
ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.
విలాపవాక్యములు 3 : 37 (ERVTE)
ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.
విలాపవాక్యములు 3 : 38 (ERVTE)
ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ.
విలాపవాక్యములు 3 : 39 (ERVTE)
ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.
విలాపవాక్యములు 3 : 40 (ERVTE)
ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.
విలాపవాక్యములు 3 : 41 (ERVTE)
ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ.
విలాపవాక్యములు 3 : 42 (ERVTE)
“ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.
విలాపవాక్యములు 3 : 43 (ERVTE)
ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ!
విలాపవాక్యములు 3 : 44 (ERVTE)
ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ.
విలాపవాక్యములు 3 : 45 (ERVTE)
ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ.
విలాపవాక్యములు 3 : 46 (ERVTE)
ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ.
విలాపవాక్యములు 3 : 47 (ERVTE)
ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”
విలాపవాక్యములు 3 : 48 (ERVTE)
ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ!
విలాపవాక్యములు 3 : 49 (ERVTE)
ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! ನಾನು ಗೋಳಾಡುತ್ತಲೇ ಇರುವೆನು!
విలాపవాక్యములు 3 : 50 (ERVTE)
ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವತನಕ ನಾನು ಗೋಳಾಡುತ್ತಲೇ ಇರುವೆನು.
విలాపవాక్యములు 3 : 51 (ERVTE)
ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ.
విలాపవాక్యములు 3 : 52 (ERVTE)
ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು.
విలాపవాక్యములు 3 : 53 (ERVTE)
ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು.
విలాపవాక్యములు 3 : 54 (ERVTE)
ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.
విలాపవాక్యములు 3 : 55 (ERVTE)
ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.
విలాపవాక్యములు 3 : 56 (ERVTE)
ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ.
విలాపవాక్యములు 3 : 57 (ERVTE)
ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.
విలాపవాక్యములు 3 : 58 (ERVTE)
ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ.
విలాపవాక్యములు 3 : 59 (ERVTE)
ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು.
విలాపవాక్యములు 3 : 60 (ERVTE)
ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು.
విలాపవాక్యములు 3 : 61 (ERVTE)
ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು.
విలాపవాక్యములు 3 : 62 (ERVTE)
ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ.
విలాపవాక్యములు 3 : 63 (ERVTE)
ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ!
విలాపవాక్యములు 3 : 64 (ERVTE)
ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು!
విలాపవాక్యములు 3 : 65 (ERVTE)
ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!
విలాపవాక్యములు 3 : 66 (ERVTE)
ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು!
❮
❯