విలాపవాక్యములు 5 : 1 (ERVTE)
{#1ಯೆಹೋವನಿಗೆ ಪ್ರಾರ್ಥನೆ } ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.
విలాపవాక్యములు 5 : 2 (ERVTE)
ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.
విలాపవాక్యములు 5 : 3 (ERVTE)
ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ.
విలాపవాక్యములు 5 : 4 (ERVTE)
ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.
విలాపవాక్యములు 5 : 5 (ERVTE)
ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.
విలాపవాక్యములు 5 : 6 (ERVTE)
ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು.
విలాపవాక్యములు 5 : 7 (ERVTE)
ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.
విలాపవాక్యములు 5 : 8 (ERVTE)
ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.
విలాపవాక్యములు 5 : 9 (ERVTE)
ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.
విలాపవాక్యములు 5 : 10 (ERVTE)
ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.
విలాపవాక్యములు 5 : 11 (ERVTE)
ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.
విలాపవాక్యములు 5 : 12 (ERVTE)
ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.
విలాపవాక్యములు 5 : 13 (ERVTE)
ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ.
విలాపవాక్యములు 5 : 14 (ERVTE)
ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟುಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ.
విలాపవాక్యములు 5 : 15 (ERVTE)
ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ.
విలాపవాక్యములు 5 : 16 (ERVTE)
ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.
విలాపవాక్యములు 5 : 17 (ERVTE)
ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.
విలాపవాక్యములు 5 : 18 (ERVTE)
ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.
విలాపవాక్యములు 5 : 19 (ERVTE)
ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು.
విలాపవాక్యములు 5 : 20 (ERVTE)
ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?
విలాపవాక్యములు 5 : 21 (ERVTE)
ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.
విలాపవాక్యములు 5 : 22 (ERVTE)
ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22