లేవీయకాండము 1 : 1 (ERVTE)
{#1ಯಜ್ಞಗಳು ಮತ್ತು ಕಾಣಿಕೆಗಳು } [PS]ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:
లేవీయకాండము 1 : 2 (ERVTE)
“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು. [PE]
లేవీయకాండము 1 : 3 (ERVTE)
[PS]“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
లేవీయకాండము 1 : 4 (ERVTE)
ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು. [PE]
లేవీయకాండము 1 : 5 (ERVTE)
[PS]“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.
లేవీయకాండము 1 : 6 (ERVTE)
ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.
లేవీయకాండము 1 : 7 (ERVTE)
ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.
లేవీయకాండము 1 : 8 (ERVTE)
ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
లేవీయకాండము 1 : 9 (ERVTE)
ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. [PE]
లేవీయకాండము 1 : 10 (ERVTE)
[PS]“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.
లేవీయకాండము 1 : 11 (ERVTE)
ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
లేవీయకాండము 1 : 12 (ERVTE)
ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
లేవీయకాండము 1 : 13 (ERVTE)
ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. [PE]
లేవీయకాండము 1 : 14 (ERVTE)
[PS]“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
లేవీయకాండము 1 : 15 (ERVTE)
ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
లేవీయకాండము 1 : 16 (ERVTE)
ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.
లేవీయకాండము 1 : 17 (ERVTE)
ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ. [PE]
❮
❯