లేవీయకాండము 11 : 1 (ERVTE)
{#1ಮಾಂಸವನ್ನು ತಿನ್ನುವುದರ ಬಗ್ಗೆ ನಿಯಮಗಳು } ಯೆಹೋವನು ಮೋಶೆ ಆರೋನರಿಗೆ ಹೀಗೆಂದನು:
లేవీయకాండము 11 : 2 (ERVTE)
“ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:
లేవీయకాండము 11 : 3 (ERVTE)
ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.
లేవీయకాండము 11 : 4 (ERVTE)
(4-6)“ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
లేవీయకాండము 11 : 5 (ERVTE)
లేవీయకాండము 11 : 6 (ERVTE)
లేవీయకాండము 11 : 7 (ERVTE)
ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
లేవీయకాండము 11 : 8 (ERVTE)
ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!
లేవీయకాండము 11 : 9 (ERVTE)
{#1ಸಮುದ್ರಾಹಾರದ ಬಗ್ಗೆ ನಿಯಮಗಳು } “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.
లేవీయకాండము 11 : 10 (ERVTE)
(10-11)ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು.
లేవీయకాండము 11 : 11 (ERVTE)
లేవీయకాండము 11 : 12 (ERVTE)
ನೀರಿನಲ್ಲಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ ಅದು ತಿನ್ನುವುದಕ್ಕೆ ಅಯೋಗ್ಯವಾಗಿದೆ.
లేవీయకాండము 11 : 13 (ERVTE)
{#1ತಿನ್ನಬಾರದ ಪಕ್ಷಿಗಳು } “ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ,
లేవీయకాండము 11 : 14 (ERVTE)
ಹದ್ದು, ಎಲ್ಲಾ ವಿಧವಾದ ಗಿಡುಗ,
లేవీయకాండము 11 : 15 (ERVTE)
ಎಲ್ಲಾ ವಿಧವಾದ ಕಾಗೆ,
లేవీయకాండము 11 : 16 (ERVTE)
ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ ಎಲ್ಲಾ ವಿಧವಾದ ಡೇಗೆ,
లేవీయకాండము 11 : 17 (ERVTE)
ಗೂಬೆ, ಹೆಗ್ಗೂಬೆ, ಸಮುದ್ರಪಕ್ಷಿ,
లేవీయకాండము 11 : 18 (ERVTE)
ನೀರುಕೋಳಿ, ರಣಹದ್ದು, ನೀರುಕಾಗೆ,
లేవీయకాండము 11 : 19 (ERVTE)
ಕೊಕ್ಕರೆ, ಸಕಲ ವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.
లేవీయకాండము 11 : 20 (ERVTE)
{#1ಕ್ರಿಮಿಕೀಟಗಳನ್ನು ತಿನ್ನುವುದರ ಬಗ್ಗೆ ನಿಯಮಗಳು } “ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು.
లేవీయకాండము 11 : 21 (ERVTE)
ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು.
లేవీయకాండము 11 : 22 (ERVTE)
ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.
లేవీయకాండము 11 : 23 (ERVTE)
“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.
లేవీయకాండము 11 : 24 (ERVTE)
ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
లేవీయకాండము 11 : 25 (ERVTE)
ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.
లేవీయకాండము 11 : 26 (ERVTE)
{#1ಪ್ರಾಣಿಗಳ ಬಗ್ಗೆ ಇನ್ನೂ ಹೆಚ್ಚಿನ ನಿಯಮಗಳು } (26-27)“ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
లేవీయకాండము 11 : 27 (ERVTE)
లేవీయకాండము 11 : 28 (ERVTE)
ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.
లేవీయకాండము 11 : 29 (ERVTE)
{#1ಹರಿದಾಡುವ ಪ್ರಾಣಿಗಳ ಬಗ್ಗೆ ನಿಯಮಗಳು } “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,
లేవీయకాండము 11 : 30 (ERVTE)
ಹಾವರಾಣಿ, ಮೊಸಳೆ, ಹಲ್ಲಿ, ಬಸವನಹುಳ, ಚಿಟ್ಟಿಲಿ,
లేవీయకాండము 11 : 31 (ERVTE)
ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
లేవీయకాండము 11 : 32 (ERVTE)
{#1ಅಶುದ್ಧ ಪ್ರಾಣಿಗಳ ಬಗ್ಗೆ ನಿಯಮಗಳು } “ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
లేవీయకాండము 11 : 33 (ERVTE)
ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.
లేవీయకాండము 11 : 34 (ERVTE)
ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.
లేవీయకాండము 11 : 35 (ERVTE)
ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.
లేవీయకాండము 11 : 36 (ERVTE)
“ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.
లేవీయకాండము 11 : 37 (ERVTE)
ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗವು ನೆಡುವುದಕ್ಕೆ ಇಟ್ಟಿರುವ ಬೀಜದ ಮೇಲೆ ಬಿದ್ದರೂ ಆ ಬೀಜ ಶುದ್ಧವಾಗಿಯೇ ಇರುತ್ತದೆ.
లేవీయకాండము 11 : 38 (ERVTE)
ಆದರೆ ನೀರು ಹಾಕಿ ನೆನಸಿದ ಬೀಜಗಳ ಮೇಲೆ ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗ ಬಿದ್ದರೆ, ಆ ಬೀಜಗಳು ನಿಮಗೆ ಅಶುದ್ಧವಾಗಿವೆ.
లేవీయకాండము 11 : 39 (ERVTE)
“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
లేవీయకాండము 11 : 40 (ERVTE)
ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
లేవీయకాండము 11 : 41 (ERVTE)
“ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು.
లేవీయకాండము 11 : 42 (ERVTE)
ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.
లేవీయకాండము 11 : 43 (ERVTE)
ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು.
లేవీయకాండము 11 : 44 (ERVTE)
ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.
లేవీయకాండము 11 : 45 (ERVTE)
ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
లేవీయకాండము 11 : 46 (ERVTE)
ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.
లేవీయకాండము 11 : 47 (ERVTE)
ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47