లేవీయకాండము 18 : 1 (ERVTE)
{#1ಲೈಂಗಿಕ ಸಂಬಂಧಗಳ ನಿಯಮಗಳು } ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 18 : 2 (ERVTE)
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮ್ಮ ದೇವರಾಗಿರುವ ಯೆಹೋವನು.
లేవీయకాండము 18 : 3 (ERVTE)
ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.
లేవీయకాండము 18 : 4 (ERVTE)
ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.
లేవీయకాండము 18 : 5 (ERVTE)
ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!
లేవీయకాండము 18 : 6 (ERVTE)
లేవీయకాండము 18 : 7 (ERVTE)
“ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ[* ಲೈಂಗಿಕ ಸಂಬಂಧ ಅಕ್ಷರಶಃ, “ಬೆತ್ತಲೆಯನ್ನು ಮುಚ್ಚದೆ.” ] ಮಾಡಬಾರದು. ನಾನೇ ಯೆಹೋವನು! “ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.
లేవీయకాండము 18 : 8 (ERVTE)
ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.
లేవీయకాండము 18 : 9 (ERVTE)
లేవీయకాండము 18 : 10 (ERVTE)
“ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ[† ಸಹೋದರಿಯ ಮನೆ ಅಥವಾ “ಕುಟುಂಬದವರು.” ಒಬ್ಬನಿಗೆ ಅನೇಕ ಹೆಂಡತಿಯರಿದ್ದರೆ, ಪ್ರತಿಯೊಬ್ಬ ಹೆಂಡತಿಯು ಮತ್ತು ಅವಳ ಮಕ್ಕಳು ತಮ್ಮದೇ ಆದ ಗುಡಾರವನ್ನು ಅಥವಾ ಮನೆಯ ಒಂದು ಭಾಗವನ್ನು ಹೊಂದಿರುತ್ತಿದ್ದರು. ಅವರು ಕುಟುಂಬದಲ್ಲಿಯೇ ಒಂದು ಚಿಕ್ಕ ಕುಟುಂಬದಂತೆ ಇರುತ್ತಿದ್ದರು. ಆದ್ದರಿಂದ, ಒಬ್ಬನು ತನ್ನ ತಂದೆಯ ಹೆಣ್ಣುಮಕ್ಕಳಲ್ಲಿ ಅವರು ಸಹೋದರಿಯಾಗಿರಲಿ ಅಥವಾ ರಕ್ತಸಂಬಂಧದ ಸಹೋದರಿಯಾಗಿರಲಿ ಯಾರೊಡನೆಯೂ ಲೈಂಗಿಕಸಂಬಂಧ ಮಾಡಬಾರದೆಂಬುದು ಇದರರ್ಥವಿರಬಹುದು. ] ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.
లేవీయకాండము 18 : 11 (ERVTE)
“ನೀವು ನಿಮ್ಮ ಮೊಮ್ಮಗಳೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮಗೆ ಅವಮಾನ ತರುವುದು.
లేవీయకాండము 18 : 12 (ERVTE)
“ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. “ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.
లేవీయకాండము 18 : 13 (ERVTE)
ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ.
లేవీయకాండము 18 : 14 (ERVTE)
ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಆಕೆಯು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.
లేవీయకాండము 18 : 15 (ERVTE)
లేవీయకాండము 18 : 16 (ERVTE)
“ಸೊಸೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ಮಗನ ಹೆಂಡತಿ.
లేవీయకాండము 18 : 17 (ERVTE)
“ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.
లేవీయకాండము 18 : 18 (ERVTE)
“ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಆಕೆಯೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು.
లేవీయకాండము 18 : 19 (ERVTE)
“ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
లేవీయకాండము 18 : 20 (ERVTE)
“ಅಲ್ಲದೆ ಸ್ತ್ರೀಯು ಮುಟ್ಟಿನಿಂದ ಅಶುದ್ಧಳಾಗಿರುವಾಗ ಲೈಂಗಿಕ ಸಂಬಂಧಕ್ಕಾಗಿ ಆಕೆಯ ಹತ್ತಿರ ಹೋಗಬಾರದು.
లేవీయకాండము 18 : 21 (ERVTE)
“ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು.
లేవీయకాండము 18 : 22 (ERVTE)
“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!
లేవీయకాండము 18 : 23 (ERVTE)
“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!
లేవీయకాండము 18 : 24 (ERVTE)
“ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು. “ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.
లేవీయకాండము 18 : 25 (ERVTE)
ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.
లేవీయకాండము 18 : 26 (ERVTE)
“ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಜನರಿಗಾಗಿ ಇರುತ್ತವೆ.
లేవీయకాండము 18 : 27 (ERVTE)
ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.
లేవీయకాండము 18 : 28 (ERVTE)
ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.
లేవీయకాండము 18 : 29 (ERVTE)
ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.
లేవీయకాండము 18 : 30 (ERVTE)
ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”
❮
❯