లేవీయకాండము 20 : 1 (ERVTE)
{#1ವಿಗ್ರಹಾರಾಧನೆಯ ಕುರಿತು ಎಚ್ಚರಿಕೆ } ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 20 : 2 (ERVTE)
“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
లేవీయకాండము 20 : 3 (ERVTE)
ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.
లేవీయకాండము 20 : 4 (ERVTE)
ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,
లేవీయకాండము 20 : 5 (ERVTE)
ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.
లేవీయకాండము 20 : 6 (ERVTE)
లేవీయకాండము 20 : 7 (ERVTE)
“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ.[* ಅಪನಂಬಿಗಸ್ತನಾಗಿದ್ದಾನೆ ಅಕ್ಷರಶಃ, “ನನಗೆ ವಿರುದ್ಧವಾಗಿ ಸೂಳೆತನ ಮಾಡುವವನಾಗಿದ್ದಾನೆ.” ] ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು. “ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.
లేవీయకాండము 20 : 8 (ERVTE)
ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ[† ಪವಿತ್ರರನ್ನಾಗಿ ಮಾಡುವ ಅಥವಾ ನಿಮ್ಮನ್ನು ವಿಶೇಷ ಜನರನ್ನಾಗಿ ಪ್ರತ್ಯೇಕಿಸುವ. ] ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
లేవీయకాండము 20 : 9 (ERVTE)
లేవీయకాండము 20 : 10 (ERVTE)
“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ[‡ ಮರಣ ಅಕ್ಷರಶಃ, “ಅವನ ರಕ್ತವು ಅವನ ತಲೆಯ ಮೇಲಿರುವುದು.” ] ಅವನೇ ಜವಾಬ್ದಾರನಾಗಿದ್ದಾನೆ. {#1ಲೈಂಗಿಕ ಪಾಪಗಳಿಗೆ ವಿಧಿಸತಕ್ಕ ಶಿಕ್ಷೆಗಳು } “ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!
లేవీయకాండము 20 : 11 (ERVTE)
ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.
లేవీయకాండము 20 : 12 (ERVTE)
లేవీయకాండము 20 : 13 (ERVTE)
“ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ.
లేవీయకాండము 20 : 14 (ERVTE)
“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
లేవీయకాండము 20 : 15 (ERVTE)
“ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ. “ಒಬ್ಬನು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು ಮತ್ತು ನೀವು ಪಶುವನ್ನು ಕೊಲ್ಲಬೇಕು.
లేవీయకాండము 20 : 16 (ERVTE)
ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
లేవీయకాండము 20 : 17 (ERVTE)
లేవీయకాండము 20 : 18 (ERVTE)
“ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.[§ ಅವನು … ಶಿಕ್ಷೆಯಾಗಬೇಕು ಅಕ್ಷರಶಃ, “ಅವನು ತನ್ನ ದೋಷವನ್ನು ತಾನೇ ಹೊತ್ತುಕೊಂಡು ಹೋಗುವನು.” ]
లేవీయకాండము 20 : 19 (ERVTE)
“ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.
లేవీయకాండము 20 : 20 (ERVTE)
“ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)
లేవీయకాండము 20 : 21 (ERVTE)
“ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.[** ಅವರು … ಸಾಯುವರು ಅಕ್ಷರಶಃ, “ಅವರು ತಮ್ಮ ಬಂಜೆತನವನ್ನು ಹೊರುವರು. ಅವರು ಸಾಯುವರು.” ]
లేవీయకాండము 20 : 22 (ERVTE)
“ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ. “ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
లేవీయకాండము 20 : 23 (ERVTE)
ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!
లేవీయకాండము 20 : 24 (ERVTE)
ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ.[†† ಅದು … ದೇಶವಾಗಿದೆ ಅಕ್ಷರಶಃ, “ಹಾಲೂ ಜೇನೂ ಹರಿಯುವ ದೇಶವಾಗಿದೆ.” ] ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.
లేవీయకాండము 20 : 25 (ERVTE)
ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಆ ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ.
లేవీయకాండము 20 : 26 (ERVTE)
ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.
లేవీయకాండము 20 : 27 (ERVTE)
“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”
❮
❯