లేవీయకాండము 25 : 1 (ERVTE)
{#1ಭೂಮಿಗೆ ವಿಶ್ರಾಂತಿಯ ಸಮಯ } ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:
లేవీయకాండము 25 : 2 (ERVTE)
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.
లేవీయకాండము 25 : 3 (ERVTE)
ನೀವು ಆರು ವರ್ಷಗಳು ನಿಮ್ಮ ಹೊಲದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿತೋಟಗಳಲ್ಲಿ ಕೆಲಸಮಾಡುವಿರಿ. ಅದರ ಫಲಗಳನ್ನು ಒಟ್ಟುಗೂಡಿಸುವಿರಿ.
లేవీయకాండము 25 : 4 (ERVTE)
ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
లేవీయకాండము 25 : 5 (ERVTE)
ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.
లేవీయకాండము 25 : 6 (ERVTE)
“ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.
లేవీయకాండము 25 : 7 (ERVTE)
ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನುವುದಕ್ಕೆ ಸಾಕಷ್ಟು ಆಹಾರವಿರುವುದು.
లేవీయకాండము 25 : 8 (ERVTE)
{#1ಜ್ಯೂಬಿಲಿ-ಬಿಡುಗಡೆಯ ವರ್ಷ } “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.
లేవీయకాండము 25 : 9 (ERVTE)
ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.
లేవీయకాండము 25 : 10 (ERVTE)
ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.
లేవీయకాండము 25 : 11 (ERVTE)
ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.
లేవీయకాండము 25 : 12 (ERVTE)
ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು.
లేవీయకాండము 25 : 13 (ERVTE)
ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹೋಗುವನು.
లేవీయకాండము 25 : 14 (ERVTE)
“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.
లేవీయకాండము 25 : 15 (ERVTE)
ನಿಮ್ಮ ನೆರೆಯವನ ಭೂಮಿಯನ್ನು ಕೊಂಡುಕೊಳ್ಳಲು ನೀವು ಬಯಸುವುದಾದರೆ, ಆಗ ಕಳೆದ ಜ್ಯೂಬಿಲಿ ವರ್ಷದಿಂದ ಈಗ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ನೀವು ಭೂಮಿಯನ್ನು ಮಾರುವುದಾದರೆ, ಪೈರುಗಳನ್ನು ಕೊಯ್ಯುವುದಕ್ಕಿರುವ ವರ್ಷಗಳನ್ನು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ.
లేవీయకాండము 25 : 16 (ERVTE)
ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. [+ ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು.]
లేవీయకాండము 25 : 17 (ERVTE)
ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!
లేవీయకాండము 25 : 18 (ERVTE)
“ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅವುಗಳಿಗೆ ವಿಧೇಯರಾಗಿರಿ. ಆಗ ನೀವು ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
లేవీయకాండము 25 : 19 (ERVTE)
ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.
లేవీయకాండము 25 : 20 (ERVTE)
“ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.
లేవీయకాండము 25 : 21 (ERVTE)
ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳವರೆಗೆ ಬೆಳೆಯುತ್ತಿರುವುದು.
లేవీయకాండము 25 : 22 (ERVTE)
ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ [+ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ] ನೀವು ಹಳೆಯ ಬೆಳೆಯನ್ನು ತಿನ್ನುವಿರಿ.
లేవీయకాండము 25 : 23 (ERVTE)
{#1ಆಸ್ತಿಯ ನಿಯಮಗಳು } “ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.
లేవీయకాండము 25 : 24 (ERVTE)
ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.
లేవీయకాండము 25 : 25 (ERVTE)
ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.
లేవీయకాండము 25 : 26 (ERVTE)
ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.
లేవీయకాండము 25 : 27 (ERVTE)
ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.
లేవీయకాండము 25 : 28 (ERVTE)
ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.
లేవీయకాండము 25 : 29 (ERVTE)
“ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.
లేవీయకాండము 25 : 30 (ERVTE)
ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.
లేవీయకాండము 25 : 31 (ERVTE)
ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.
లేవీయకాండము 25 : 32 (ERVTE)
“ಆದರೆ ಲೇವಿಯರ ಪಟ್ಟಣಗಳ ಕುರಿತು ಹೇಳುವುದಾದರೆ, ಲೇವಿಯರು ತಮಗೆ ಸೇರಿದ ಪಟ್ಟಣಗಳಲ್ಲಿರುವ ತಮ್ಮ ಮನೆಗಳನ್ನು ಯಾವಾಗ ಬೇಕಾದರೂ ಹಿಂದಕ್ಕೆ ಕೊಂಡುಕೊಳ್ಳಬಹುದು.
లేవీయకాండము 25 : 33 (ERVTE)
ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಆ ಮನೆಯು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಆ ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.
లేవీయకాండము 25 : 34 (ERVTE)
ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ.
లేవీయకాండము 25 : 35 (ERVTE)
{#1ಗುಲಾಮರ ಯಜಮಾನರು ಅನುಸರಿಸತಕ್ಕ ನಿಯಮಗಳು } “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ[* ವಚನ 35 ಇದನ್ನು ಮತ್ತೊಂದು ರೀತಿಯಲ್ಲಿಯೂ ಅರ್ಥಮಾಡಿಕೊಳ್ಳಬಹುದು: “ಅವನು ಅನ್ಯನಾಗಿದ್ದರೂ ತಾತ್ಕಾಲಿಕ ನಿವಾಸಿಯಾಗಿದ್ದರೂ ಅವನಿಗೆ ಸಹಾಯ ಮಾಡಿರಿ.” ] ವಾಸಿಸಲು ನೀವು ಅವಕಾಶ ಕೊಡಬೇಕು.
లేవీయకాండము 25 : 36 (ERVTE)
ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು[† ಸಹೋದರನು ಅಥವಾ “ನಿಮ್ಮ ಸ್ವಂತ ದೇಶದವನು.” ] ನಿಮ್ಮ ಸಂಗಡ ವಾಸಿಸಲಿ.
లేవీయకాండము 25 : 37 (ERVTE)
ನೀವು ಅವನಿಗೆ ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ನೀವು ಅವನಿಗೆ ಮಾರುವ ಆಹಾರಪದಾರ್ಥಗಳಿಂದ ಲಾಭವನ್ನು ಗಳಿಸಲು ಪ್ರಯತ್ನಿಸಬಾರದು.
లేవీయకాండము 25 : 38 (ERVTE)
ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.
లేవీయకాండము 25 : 39 (ERVTE)
“ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.
లేవీయకాండము 25 : 40 (ERVTE)
ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು.
లేవీయకాండము 25 : 41 (ERVTE)
ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.
లేవీయకాండము 25 : 42 (ERVTE)
ಯಾಕೆಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರಮಾಡಿದೆನು; ಅವರು ಮತ್ತೆ ಗುಲಾಮರಾಗಬಾರದು.
లేవీయకాండము 25 : 43 (ERVTE)
ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.
లేవీయకాండము 25 : 44 (ERVTE)
“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.
లేవీయకాండము 25 : 45 (ERVTE)
ಅಲ್ಲದೆ ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಂದ ಮಕ್ಕಳನ್ನು ಗುಲಾಮರನ್ನಾಗಿ ಕೊಂಡುಕೊಳ್ಳಬಹುದು. ಗುಲಾಮರಾದ ಮಕ್ಕಳು ನಿಮಗೆ ಸೇರಿದವರಾಗಿದ್ದಾರೆ.
లేవీయకాండము 25 : 46 (ERVTE)
ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.
లేవీయకాండము 25 : 47 (ERVTE)
“ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ.
లేవీయకాండము 25 : 48 (ERVTE)
ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು.
లేవీయకాండము 25 : 49 (ERVTE)
ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.
లేవీయకాండము 25 : 50 (ERVTE)
“ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ.
లేవీయకాండము 25 : 51 (ERVTE)
ಜ್ಯೂಬಿಲಿ ವರ್ಷಕ್ಕೆ ಇನ್ನೂ ಹೆಚ್ಚು ವರ್ಷಗಳು ಇರುವುದಾದರೆ, ಅವನು ಬಹಳ ಹೆಚ್ಚು ಹಣವನ್ನು ಕೊಡಬೇಕಾಗುತ್ತದೆ.
లేవీయకాండము 25 : 52 (ERVTE)
ಜ್ಯೂಬಿಲಿ ವರ್ಷಕ್ಕೆ ಕೇವಲ ಸ್ವಲ್ಪ ವರ್ಷಗಳು ಉಳಿದಿದ್ದರೆ, ಸ್ವಲ್ಪ ಹಣವನ್ನು ಕೊಡಬೇಕಾಗುತ್ತದೆ.
లేవీయకాండము 25 : 53 (ERVTE)
ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ.
లేవీయకాండము 25 : 54 (ERVTE)
“ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು.
లేవీయకాండము 25 : 55 (ERVTE)
ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55