లేవీయకాండము 6 : 1 (ERVTE)
{#1ಬೇರೆ ಪಾಪಗಳಿಗಾಗಿ ದೋಷಪರಿಹಾರಕ ಯಜ್ಞಗಳು } [PS]ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 6 : 2 (ERVTE)
“ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ
లేవీయకాండము 6 : 3 (ERVTE)
ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,
లేవీయకాండము 6 : 4 (ERVTE)
ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ
లేవీయకాండము 6 : 5 (ERVTE)
ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.
లేవీయకాండము 6 : 6 (ERVTE)
ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.
లేవీయకాండము 6 : 7 (ERVTE)
ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.” [PE]
లేవీయకాండము 6 : 8 (ERVTE)
{#1ಸರ್ವಾಂಗಹೋಮಗಳು } [PS]ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 6 : 9 (ERVTE)
“ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ[* ವೇದಿಕೆಯ ಒಲೆ ಯಜ್ಞವನ್ನು ಸುಡುವ ಸ್ಥಳ. ] ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.
లేవీయకాండము 6 : 10 (ERVTE)
ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.
లేవీయకాండము 6 : 11 (ERVTE)
ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
లేవీయకాండము 6 : 12 (ERVTE)
ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.
లేవీయకాండము 6 : 13 (ERVTE)
ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು. [PE]
లేవీయకాండము 6 : 14 (ERVTE)
{#1ಧಾನ್ಯಸಮರ್ಪಣೆಗಳು } [PS]“ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.
లేవీయకాండము 6 : 15 (ERVTE)
ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. [PE]
లేవీయకాండము 6 : 16 (ERVTE)
[PS]“ಆರೋನನ ಮತ್ತು ಅವನ ಪುತ್ರರು ಧಾನ್ಯನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಆ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.
లేవీయకాండము 6 : 17 (ERVTE)
ಹುಳಿ ಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.
లేవీయకాండము 6 : 18 (ERVTE)
ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.” [PE]
లేవీయకాండము 6 : 19 (ERVTE)
{#1ಯಾಜಕರ ಧಾನ್ಯನೈವೇದ್ಯ } [PS]ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 6 : 20 (ERVTE)
“ಆರೋನನು ಮತ್ತು ಅವನ ಪುತ್ರರು ಆರೋನನ ನಂತರ ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಮಹಾಯಾಜಕರಾಗಿ ಅಭಿಷೇಕಿಸಲ್ಪಡುವ ದಿನದಲ್ಲಿ ಇದನ್ನು ಮಾಡಬೇಕು. ಅವರು ಎಂಟು ಬಟ್ಟಲು[† ಎಂಟು ಬಟ್ಟಲು ಅಕ್ಷರಶಃ, “1/10 ಏಫಾ.” ] ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.
లేవీయకాండము 6 : 21 (ERVTE)
ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಡಬೇಕು. ಅದನ್ನು ಬೇಯಿಸಿದ ಮೇಲೆ ನೀವು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. [PE]
లేవీయకాండము 6 : 22 (ERVTE)
[PS]“ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆಯನ್ನು ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು.
లేవీయకాండము 6 : 23 (ERVTE)
ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.” [PE]
లేవీయకాండము 6 : 24 (ERVTE)
{#1ಪಾಪಪರಿಹಾರ ಯಜ್ಞದ ಕಟ್ಟಳೆ } [PS]ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
లేవీయకాండము 6 : 25 (ERVTE)
“ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ.
లేవీయకాండము 6 : 26 (ERVTE)
ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.
లేవీయకాండము 6 : 27 (ERVTE)
ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. [PE][PS]“ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.
లేవీయకాండము 6 : 28 (ERVTE)
ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು. [PE]
లేవీయకాండము 6 : 29 (ERVTE)
[PS]“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.
లేవీయకాండము 6 : 30 (ERVTE)
ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: