లూకా సువార్త 1 : 1 (ERVTE)
{#1ಯೇಸುವಿನ ಜೀವನದ ಬಗ್ಗೆ ಲೂಕನ ಬರಹ } ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
లూకా సువార్త 1 : 2 (ERVTE)
ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.
లూకా సువార్త 1 : 3 (ERVTE)
ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.
లూకా సువార్త 1 : 4 (ERVTE)
ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.
లూకా సువార్త 1 : 5 (ERVTE)
{#1ಜಕರೀಯ ಮತ್ತು ಎಲಿಜಬೇತ್ } ಹೆರೋದನು[* ಹೆರೋದ ಜುದೇಯವನ್ನು ಆಳಿದ 1ನೇ ಹೆರೋದನು ಕ್ರಿ.ಪೂ. 40- 4 ] ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ [† ಅಬೀಯನ ವರ್ಗ ಯೆಹೂದ್ಯಯಾಜಕರು 24 ವರ್ಗಗಳಾಗಿ ವಿಂಗಡಿಸಲ್ಪಟ್ಟಿದ್ದರು. ನೋಡಿರಿ: 1 ಪೂ.ಕಾ.ವೃ. 2 4 ] ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
లూకా సువార్త 1 : 6 (ERVTE)
ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
లూకా సువార్త 1 : 7 (ERVTE)
ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
లూకా సువార్త 1 : 8 (ERVTE)
ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.
లూకా సువార్త 1 : 9 (ERVTE)
ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
లూకా సువార్త 1 : 10 (ERVTE)
ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.
లూకా సువార్త 1 : 11 (ERVTE)
ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.
లూకా సువార్త 1 : 12 (ERVTE)
ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.
లూకా సువార్త 1 : 13 (ERVTE)
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
లూకా సువార్త 1 : 14 (ERVTE)
ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು.
లూకా సువార్త 1 : 15 (ERVTE)
ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.[‡ ಪವಿತ್ರಾತ್ಮ ದೇವರ ಆತ್ಮನೆಂತಲೂ ಕ್ರಿಸ್ತನ ಆತ್ಮನೆಂತಲೂ ಸಂತೈಸುವವನೆಂತಲೂ ಕರೆಯಲ್ಪಟ್ಟಿದ್ದಾನೆ. ಆತನು ದೇವರೊಂದಿಗೆ ಮತ್ತು ಕ್ರಿಸ್ತನೊಂದಿಗೆ ಸೇರಿ, ಲೋಕದ ಜನರ ಮಧ್ಯದಲ್ಲಿ ದೇವರ ಕಾರ್ಯವನ್ನು ಮಾಡುತ್ತಾನೆ. ]
లూకా సువార్త 1 : 16 (ERVTE)
“ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು.
లూకా సువార్త 1 : 17 (ERVTE)
ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ[§ ಎಲೀಯ ಸುಮಾರು ಕ್ರಿ.ಪೂ. 850ರಲ್ಲಿ ಜೀವಿಸಿದ್ದ ಪ್ರವಾದಿ. ] ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
లూకా సువార్త 1 : 18 (ERVTE)
లూకా సువార్త 1 : 19 (ERVTE)
ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು. ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.
లూకా సువార్త 1 : 20 (ERVTE)
ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
లూకా సువార్త 1 : 21 (ERVTE)
ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
లూకా సువార్త 1 : 22 (ERVTE)
ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
లూకా సువార్త 1 : 23 (ERVTE)
ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು.
లూకా సువార్త 1 : 24 (ERVTE)
ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
లూకా సువార్త 1 : 25 (ERVTE)
ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.
లూకా సువార్త 1 : 26 (ERVTE)
{#1ಕನ್ಯೆ ಮರಿಯಳು } (26-27)ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.
లూకా సువార్త 1 : 27 (ERVTE)
లూకా సువార్త 1 : 28 (ERVTE)
ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.
లూకా సువార్త 1 : 29 (ERVTE)
లూకా సువార్త 1 : 30 (ERVTE)
ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು. ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.
లూకా సువార్త 1 : 31 (ERVTE)
ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.
లూకా సువార్త 1 : 32 (ERVTE)
ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
లూకా సువార్త 1 : 33 (ERVTE)
ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.
లూకా సువార్త 1 : 34 (ERVTE)
లూకా సువార్త 1 : 35 (ERVTE)
ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು. ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
లూకా సువార్త 1 : 36 (ERVTE)
ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
లూకా సువార్త 1 : 37 (ERVTE)
ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.
లూకా సువార్త 1 : 38 (ERVTE)
లూకా సువార్త 1 : 39 (ERVTE)
ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು. {#1ಮರಿಯಳು ನೀಡಿದ ಸಂದರ್ಶನ } ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.
లూకా సువార్త 1 : 40 (ERVTE)
ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.
లూకా సువార్త 1 : 41 (ERVTE)
ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
లూకా సువార్త 1 : 42 (ERVTE)
ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
లూకా సువార్త 1 : 43 (ERVTE)
ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!
లూకా సువార్త 1 : 44 (ERVTE)
ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.
లూకా సువార్త 1 : 45 (ERVTE)
ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.
లూకా సువార్త 1 : 46 (ERVTE)
{#1ಮರಿಯಳು ದೇವರನ್ನು ಸ್ತುತಿಸಿದಳು } ಆಗ ಮರಿಯಳು,
లూకా సువార్త 1 : 47 (ERVTE)
“ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ. ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.
లూకా సువార్త 1 : 48 (ERVTE)
ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
లూకా సువార్త 1 : 49 (ERVTE)
ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು.
లూకా సువార్త 1 : 50 (ERVTE)
ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
లూకా సువార్త 1 : 51 (ERVTE)
ಆತನು ತನ್ನ ಭುಜಬಲವನ್ನು ತೋರಿ ಗರ್ವಿಷ್ಠರನ್ನು ಚದರಿಸುತ್ತಾನೆ.
లూకా సువార్త 1 : 52 (ERVTE)
ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.
లూకా సువార్త 1 : 53 (ERVTE)
ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.
లూకా సువార్త 1 : 54 (ERVTE)
ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
లూకా సువార్త 1 : 55 (ERVTE)
ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.
లూకా సువార్త 1 : 56 (ERVTE)
లూకా సువార్త 1 : 57 (ERVTE)
ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು. {#1ಯೋಹಾನನ ಜನನ } ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು.
లూకా సువార్త 1 : 58 (ERVTE)
ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
లూకా సువార్త 1 : 59 (ERVTE)
ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
లూకా సువార్త 1 : 60 (ERVTE)
ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.
లూకా సువార్త 1 : 61 (ERVTE)
ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.
లూకా సువార్త 1 : 62 (ERVTE)
ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
లూకా సువార్త 1 : 63 (ERVTE)
ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
లూకా సువార్త 1 : 64 (ERVTE)
ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.
లూకా సువార్త 1 : 65 (ERVTE)
ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.
లూకా సువార్త 1 : 66 (ERVTE)
ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
లూకా సువార్త 1 : 67 (ERVTE)
{#1ಜಕರೀಯನ ಪ್ರವಾದನೆ } ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
లూకా సువార్త 1 : 68 (ERVTE)
“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
లూకా సువార్త 1 : 69 (ERVTE)
ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
లూకా సువార్త 1 : 70 (ERVTE)
ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
లూకా సువార్త 1 : 71 (ERVTE)
ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
లూకా సువార్త 1 : 72 (ERVTE)
ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
లూకా సువార్త 1 : 73 (ERVTE)
ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
లూకా సువార్త 1 : 74 (ERVTE)
(74-75)ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.
లూకా సువార్త 1 : 75 (ERVTE)
లూకా సువార్త 1 : 76 (ERVTE)
“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
లూకా సువార్త 1 : 77 (ERVTE)
ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
లూకా సువార్త 1 : 78 (ERVTE)
“ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
లూకా సువార్త 1 : 79 (ERVTE)
ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
లూకా సువార్త 1 : 80 (ERVTE)
ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72 73 74 75 76 77 78 79 80