లూకా సువార్త 10 : 1 (ERVTE)
{#1ಸುವಾರ್ತಾಸೇವೆಗೆ ಹೊರಟ ಎಪ್ಪತ್ತೆರಡು ಮಂದಿ } ಇದಾದನಂತರ, ಯೇಸು ಇನೂ ಎಪ್ಪತ್ತೆರಡು[* ಎಪ್ಪತ್ತೆರಡು ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ ಎಪ್ಪತ್ತು ಎಂದು ಬರೆದಿದೆ. ] ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.
లూకా సువార్త 10 : 2 (ERVTE)
ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
లూకా సువార్త 10 : 3 (ERVTE)
“ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ.
లూకా సువార్త 10 : 4 (ERVTE)
ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.
లూకా సువార్త 10 : 5 (ERVTE)
ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.
లూకా సువార్త 10 : 6 (ERVTE)
ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.
లూకా సువార్త 10 : 7 (ERVTE)
ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.
లూకా సువార్త 10 : 8 (ERVTE)
“ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.
లూకా సువార్త 10 : 9 (ERVTE)
ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.
లూకా సువార్త 10 : 10 (ERVTE)
“ಆದರೆ ನೀವು ಒಂದು ಊರಿಗೆ ಹೋದಾಗ, ಅಲ್ಲಿಯ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ನೀವು ಆ ಊರಿನ ಬೀದಿಗಳಿಗೆ ಹೋಗಿ,
లూకా సువార్త 10 : 11 (ERVTE)
‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.
లూకా సువార్త 10 : 12 (ERVTE)
ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ[† ಸೊದೋಮ್ ಬಹಳ ಕೆಟ್ಟಜನರು ವಾಸಿಸಿದ್ದ ಪಟ್ಟಣ. ದೇವರು ಅವರ ಪಟ್ಟಣವನ್ನು ನಾಶಮಾಡುವುದರ ಮೂಲಕ ಅವರನ್ನು ದಂಡಿಸಿದನು. ] ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.
లూకా సువార్త 10 : 13 (ERVTE)
{#1ನಂಬಲೊಲ್ಲದ ಜನರಿಗೆ ಯೇಸುವಿನ ಎಚ್ಚರಿಕೆ
(ಮತ್ತಾಯ 11:20-24) } “ಕೊರಾಜಿನೇ, ಬೆತ್ಸಾಯಿದವೇ,[‡ ಕೊರಾಜಿನ್, ಬೆತ್ಸಾಯಿದ ಗಲಿಲಾಯ ಸರೋವರದ ಬಳಿ ಇದ್ದ ಪಟ್ಟಣಗಳು. ಯೇಸು ಇಲ್ಲಿ ಜನರಿಗೆ ಬೋಧಿಸಿದನು. ] ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
లూకా సువార్త 10 : 14 (ERVTE)
ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.
లూకా సువార్త 10 : 15 (ERVTE)
ಕಪೆರ್ನೌಮೇ,[§ ಕಪೆರ್ನೌಮ್ ಗಲಿಲಾಯ ಪ್ರಾಂತ್ಯದ ಒಂದು ಊರು. ಯೇಸು ಇಲ್ಲಿ ಜನರಿಗೆ ಬೋಧಿಸಿದನು. ] ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!
లూకా సువార్త 10 : 16 (ERVTE)
లూకా సువార్త 10 : 17 (ERVTE)
“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು. {#1ಸೈತಾನನ ಬೀಳುವಿಕೆ }
లూకా సువార్త 10 : 18 (ERVTE)
ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು. ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.
లూకా సువార్త 10 : 19 (ERVTE)
ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
లూకా సువార్త 10 : 20 (ERVTE)
ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.
లూకా సువార్త 10 : 21 (ERVTE)
{#1ಯೇಸು ತಂದೆಗೆ ಮಾಡಿದ ಪ್ರಾರ್ಥನೆ
(ಮತ್ತಾಯ 11:25-27; 13:16-17) }
లూకా సువార్త 10 : 22 (ERVTE)
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
లూకా సువార్త 10 : 23 (ERVTE)
“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.” ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು!
లూకా సువార్త 10 : 24 (ERVTE)
ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
లూకా సువార్త 10 : 25 (ERVTE)
{#1ಒಳ್ಳೆಯ ಸಮಾರ್ಯದವನ ಸಾಮ್ಯ }
లూకా సువార్త 10 : 26 (ERVTE)
ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.
లూకా సువార్త 10 : 27 (ERVTE)
ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.
లూకా సువార్త 10 : 28 (ERVTE)
ಅದಕ್ಕೆ ಅವನು, “ ‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’[✡ ಉಲ್ಲೇಖನ: ಧರ್ಮೋಪದೇಶ. 6: 5 ] ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’ [✡ ಉಲ್ಲೇಖನ: ಯಾಜಕಕಾಂಡ 19: 18. ] ಎಂದು ಬರೆದಿದೆ” ಎಂಬುದಾಗಿ ಹೇಳಿದನು.
లూకా సువార్త 10 : 29 (ERVTE)
ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.
లూకా సువార్త 10 : 30 (ERVTE)
ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.
లూకా సువార్త 10 : 31 (ERVTE)
ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು. “ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು.
లూకా సువార్త 10 : 32 (ERVTE)
ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.
లూకా సువార్త 10 : 33 (ERVTE)
“ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು.
లూకా సువార్త 10 : 34 (ERVTE)
ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.
లూకా సువార్త 10 : 35 (ERVTE)
ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”
లూకా సువార్త 10 : 36 (ERVTE)
లూకా సువార్త 10 : 37 (ERVTE)
ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು.
లూకా సువార్త 10 : 38 (ERVTE)
ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ[** ನೆರೆಯವರಿಗೆ ಇತರ ಜನರಿಂದ ಸಹಾಯದ ಅಗತ್ಯವಿರುವವರು. ] ಹಾಗೆಯೇ ಮಾಡು!” ಎಂದನು. {#1ಮರಿಯಳು ಮತ್ತು ಮಾರ್ಥಳು } ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು.
లూకా సువార్త 10 : 39 (ERVTE)
ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.
లూకా సువార్త 10 : 40 (ERVTE)
ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.
లూకా సువార్త 10 : 41 (ERVTE)
ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.
లూకా సువార్త 10 : 42 (ERVTE)
ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42